Wednesday, May 6, 2026

ಭೋಪಾಲ್ | ಎಸ್‌.ಯು.ವಿಗೆ ಪಿಕಪ್ ಟ್ರಕ್ ಢಿಕ್ಕಿ; 12 ಮಂದಿ ಮೃತ್ಯು

ಭೋಪಾಲ್: ಇಂಧೋರ್-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಇತರ 23 ಮಂದಿ ಗಾಯಗೊಂಡಿದ್ದಾರೆ. ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ಟ್ರಕ್ ಎಸ್ಯುವಿಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕಾಲಿಯಾ ಪಥದ ಬಳಿಯ ಪೆಟ್ರೋಲ್ ಬಂಕ್ ಸಮೀಪ ರಾತ್ರಿ 8.30ರ ವೇಳೆಗೆ ಈ ದುರಂತ ಸಂಭವಿಸಿದೆ. ಅಪಘಾತಕ್ಕೀಡಾದ ಪಿಕಪ್ ಟ್ರಕ್‌ನಲ್ಲಿ 35 ಕೂಲಿ ಕಾರ್ಮಿಕರು ಇದ್ದರು ಎಂದು ತಿಳಿದು ಬಂದಿದ್ದು, ಅವರು ಈರುಳ್ಳಿ ಹೊಲದಲ್ಲಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದರು.

“ಪಿಕಪ್ ಟ್ರಕ್ ಅತಿವೇಗವಾಗಿ ಬರುತ್ತಿತ್ತು. ಚಾಲಕ ನಿಯಂತ್ರಣ ಕಳೆದುಕೊಂಡು ಈ ದುರಂತ ಸಂಭವಿಸಿದೆ. ವಾಹನ ಮೂರು-ನಾಲ್ಕು ಬಾರಿ ಉರುಳಿ ಬಿದ್ದು, ಎದುರುಗಡೆಯ ರಸ್ತೆಗೆ ಮಗುಚಿ ಸ್ಕಾರ್ಪಿಯೊಗೆ ಡಿಕ್ಕಿ ಹೊಡೆದಿದೆ,” ಎಂದು ಧರ್ ಪೊಲೀಸ್ ಅಧೀಕ್ಷಕ ಮಯಾಂಕ್ ಅವಸ್ಥಿ ತಿಳಿಸಿದ್ದಾರೆ.

ಹನ್ನೆರಡು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ 10 ಮಂದಿಯನ್ನು ಇಂಧೋರಿನ ಎಂವೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ 11 ಮಂದಿಗೆ ಧರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, “ಧರ್‌ನಲ್ಲಿ ಸಂಭವಿಸಿದ ಈ ಘಟನೆ ಬಗ್ಗೆ ಕೇಳಿ ತೀವ್ರ ನೋವಾಗಿದೆ. ಈ ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಹೃದಯಾಂತರಾಳದಿಂದ ಶೋಕ ವ್ಯಕ್ತಪಡಿಸುತ್ತಿದ್ದೇನೆ. ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ 4 ಲಕ್ಷ, ತೀವ್ರವಾಗಿ ಗಾಯಗೊಂಡವರಿಗೆ 1 ಲಕ್ಷ ಮತ್ತು ಇತರ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.

More like this
Related

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಬೆಂಕಿಗಾಹುತಿ –ಇಬ್ಬರ ಸಾವು

ಭೋಪಾಲ್: ಮಧ್ಯಪ್ರದೇಶದ ದಬ್ರಾ ಜಿಲ್ಲೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ...

ಟಿವಿಕೆ ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಭಾರಿ ಶಾಕ್, ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿ ತಿರುವು ಕಂಡುಬಂದಿದ್ದು, DMK ನೇತೃತ್ವದ ಮೈತ್ರಿಗೆ...

ಬಿಹಾರದ ಛಾಪ್ರಾದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಮಹಿಳಾ ಆರ್ಕೆಸ್ಟ್ರಾ ಕಲಾವಿದರು ಸೇರಿ 4 ಮಂದಿ ಸಾವು

ಪಾಟ್ನಾ: ಬಿಹಾರದ ಛಾಪ್ರಾ ನಗರದ ಹೊರವಲಯದಲ್ಲಿರುವ ಡಾ. ಪಿ.ಎನ್. ಸಿಂಗ್ ಡಿಗ್ರಿ...

ಕೊಡವೂರು ಮಹಾ ರುದ್ರ ಯಾಗ: ಮಲ್ಪೆ ಮೀನುಗಾರರ ಸಂಘದ ಮುಖಂಡರೊಂದಿಗೆ ಸಭೆ

ಮಲ್ಪೆ : ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ದಲ್ಲಿ ಪ್ರಸಾದ್ ರಾಜ್...

Copying is disabled on Udupi Digital News.