Saturday, October 31, 2026

ಸಿಜೆಐ ವಿರುದ್ಧ ವಿವಾದಾತ್ಮಕ ಪೋಸ್ಟ್: ಕೇರಳ ಕಾಂಗ್ರೆಸ್ ಘಟಕದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್ ಘಟಕದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ಇಬ್ಬರು ವಕೀಲರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯವು ರಿಟ್ ಅರ್ಜಿಯಾಗಿ ನೋಂದಾಯಿಸಿಕೊಂಡಿದೆ. ಈ ನಡುವೆ, ಕೇರಳ ಕಾಂಗ್ರೆಸ್ ನಾಯಕತ್ವವು ಪೋಸ್ಟ್ ಕುರಿತು ವಿಷಾದ ವ್ಯಕ್ತಪಡಿಸಿ, ಅದು ಪಕ್ಷದ ಅಧಿಕೃತ ನಿಲುವಲ್ಲ ಎಂದು ಸ್ಪಷ್ಟಪಡಿಸಿದೆ.

ವಕೀಲರಾದ ವಿನೀತ್ ಜಿಂದಾಲ್ ಮತ್ತು ಶ್ರೀಜೇಶ್ ಎಸ್.ಆರ್. ಅವರು ಸಿಜೆಐ ಅವರಿಗೆ ಪತ್ರ ಬರೆದು, ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟವಾಗಿದ್ದ ವಿವಾದಾತ್ಮಕ ಪೋಸ್ಟ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಪತ್ರದ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ರಿಟ್ ಅರ್ಜಿಯಾಗಿ ನೋಂದಾಯಿಸಿಕೊಂಡಿದೆ. ಮತ್ತೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲರೊಬ್ಬರು ನೀಡಿದ್ದ ಕಾನೂನು ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸನ್ನಿ ಜೋಸೆಫ್, ಪಕ್ಷದ ನಾಯಕತ್ವದ ಅನುಮತಿ ಅಥವಾ ಗಮನಕ್ಕೆ ಬಾರದೆ ಈ ಪೋಸ್ಟ್ ಪ್ರಕಟವಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿದ್ದ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವನ್ನು ಪ್ರತಿನಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸನ್ನಿ ಜೋಸೆಫ್, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ವಿವಾದಾತ್ಮಕ ಪೋಸ್ಟ್ ಪ್ರಕಟಿಸಲು ಕಾರಣರಾದ ವಿಜಯ್ ತೊಟ್ಟತ್ತಿಲ್ ಅವರನ್ನು ಅವರು ನಿರ್ವಹಿಸುತ್ತಿದ್ದ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿವಾದವು ಈ ತಿಂಗಳ ಆರಂಭದಲ್ಲಿ ನವದೆಹಲಿಯಲ್ಲಿ ನಡೆದ INDIA ಮೈತ್ರಿಕೂಟದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಆರಂಭವಾಗಿತ್ತು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸುಪ್ರೀಂ ಕೋರ್ಟ್‌ನತ್ತ ಮೆರವಣಿಗೆ ನಡೆಸಿದ್ದವು. ಈ ಸಂದರ್ಭದಲ್ಲಿ ಕಾನೂನು ನಿರ್ಬಂಧಗಳ ಹಿನ್ನೆಲೆಯಲ್ಲಿ ಮೈತ್ರಿಕೂಟದ ನಾಯಕರನ್ನು ಭೇಟಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದರು ಎನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ ಖಾತೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸುವ ಸಂದೇಶ ಪ್ರಕಟಿಸಲಾಗಿತ್ತು. ಅದರಲ್ಲಿ, “ಸೂರ್ಯಕಾಂತ್, ರಾಜೀನಾಮೆ ನೀಡಿ. ನಿಮ್ಮ ಸ್ಥಾನಕ್ಕೆ ಬೇರೊಬ್ಬರನ್ನು ನಾವು ಹುಡುಕುತ್ತೇವೆ” ಎಂಬ ವಿವಾದಾತ್ಮಕ ಹೇಳಿಕೆ . ಈ ಪೋಸ್ಟ್ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಕೆಲವೇ ಸಮಯದಲ್ಲಿ ಅದನ್ನು ಅಳಿಸಲಾಗಿತ್ತು.

ಬಳಿಕ ಪಕ್ಷದ ರಾಜ್ಯ ನಾಯಕತ್ವವು ಈ ಹೇಳಿಕೆಗೂ ಕಾಂಗ್ರೆಸ್‌ನ ಅಧಿಕೃತ ನಿಲುವಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿ ವಿವಾದವನ್ನು ತಣ್ಣಗಾಗಿಸಲು ಪ್ರಯತ್ನಿಸಿತ್ತು. ಆದರೆ, ಇದೀಗ ಇಬ್ಬರು ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಕ್ರಮಕ್ಕೆ ಮುಂದಾಗಿರುವುದರಿಂದ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಪಕ್ಷದ ಅಧ್ಯಕ್ಷರು ಕ್ಷಮೆಯಾಚಿಸಿ, ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿದ್ದರೂ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿರುವುದು ಗಮನ ಸೆಳೆದಿದೆ.

More like this
Related

ಬಸ್ಸುಗಳಿಗೆ ಡೀಸೆಲ್‌ ತುಂಬಿಸಲು ಸರ್ಕಾರದ ಬಳಿ ಹಣವಿಲ್ಲ: ಬಿಜೆಪಿ–ಜೆಡಿಎಸ್‌ ಜತೆಗಿದ್ದರಷ್ಟೇ ಗೆಲುವು ಯಡಿಯೂರಪ್ಪ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಒಟ್ಟಾಗಿ ಸ್ಪರ್ಧಿಸಿದರಷ್ಟೇ ರಾಜ್ಯದಲ್ಲಿ...

ಮೀನುಗಾರಿಕಾ ದೋಣಿಯ ಕೋಲ್ಡ್ ಸ್ಟೋರೇಜ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ: ಉಸಿರುಗಟ್ಟಿ ಇಬ್ಬರು ಮೀನುಗಾರರ ಸಾವು

ಕಾರವಾರ: ಮೀನುಗಾರಿಕಾ ದೋಣಿಯ ಕೋಲ್ಡ್ ಸ್ಟೋರೇಜ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲ...

ನಂದಿನಿ ಗ್ರಾಹಕರ ಜೇಬಿಗೆ ಕತ್ತರಿ; ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವನ್ನೂ ಪರಿಷ್ಕರಿಸಿದ ಕೆಎಂಎಫ್

ಬೆಂಗಳೂರು: ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮತ್ತೊಂದು ಬೆಲೆ...

ಡಾ. ಜಿ.ಎಸ್. ಚಂದ್ರಶೇಖರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಮರು ಘೋಷಿಸಲಿ: ಉಮೇಶ್ ಎ. ನಾಯ್ಕ್ ಆಗ್ರಹ

ಉಡುಪಿ: ಮೂರು ದಶಕಗಳಿಗೂ ಹೆಚ್ಚು ಕಾಲ ವೈದ್ಯಕೀಯ ಹಾಗೂ ಸಾಮಾಜಿಕ ಸೇವೆಯಲ್ಲಿ...

Copying is disabled on Udupi Digital News.