Wednesday, September 16, 2026

ಕೋಲ್ಕತ್ತಾದ ಐ-ಪಿಎಸಿ ಕಚೇರಿ, ಟಿಎಂಸಿ ಐಟಿ ಮುಖ್ಯಸ್ಥರ ನಿವಾಸದ ಮೇಲೆ ಈಡಿ ದಾಳಿ

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಕಚೇರಿ ಮತ್ತು ಟಿಎಂಸಿ ಐಟಿ ವಿಭಾಗದ ಮುಖ್ಯಸ್ಥ ಪ್ರತೀಕ್ ಜೈನ್ ನಿವಾಸ ಸೇರಿದಂತೆ ಹಲವೆಡೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ.

ಈಡಿ ದಾಳಿ ಬಗ್ಗೆ ಮಾಹಿತಿ ಬಂದ ತಕ್ಷಣ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜೈನ್ ನಿವಾಸಕ್ಕೆ ತೆರಳಿದ್ದಾರೆ. ಐ-ಪಿಎಸಿ ಕಚೇರಿ ಮೇಲಿನ ದಾಳಿಯನ್ನು ಬೆದರಿಕೆಯ ಕೃತ್ಯ ಎಂದ ಮಮತಾ ಬ್ಯಾನರ್ಜಿ, “ಇದು ಕಾನೂನು ಜಾರಿಯಲ್ಲ, ಇದು ರಾಜಕೀಯ ಸೇಡು. ಗೃಹ ಸಚಿವರು ದೇಶವನ್ನು ರಕ್ಷಿಸುವವರಂತೆ ಅಲ್ಲ, ಅತ್ಯಂತ ನೀಚ ಗೃಹ ಸಚಿವರಂತೆ ವರ್ತಿಸುತ್ತಿದ್ದಾರೆ” ಎಂದು ಹೇಳಿದರು.

ಈ ದಾಳಿಯನ್ನು “ಅತ್ಯಂತ ದುರದೃಷ್ಟಕರ” ಎಂದ ಮಮತಾ ಬ್ಯಾನರ್ಜಿ, ರಾಜಕೀಯ ಪಕ್ಷಗಳ ಐಟಿ ಮುಖ್ಯಸ್ಥರ ನಿವಾಸಗಳ ಮೇಲೆ ದಾಳಿ ಮಾಡುವುದು ಕೇಂದ್ರ ಗೃಹ ಸಚಿವರ ಕೆಲಸವೇ? ಎಂದು ಪ್ರಶ್ನಿಸಿದ್ದಾರೆ.

“ಅವರು ನಮ್ಮ ಐಟಿ ಮುಖ್ಯಸ್ಥರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅವರು ನಮ್ಮ ಪಕ್ಷದ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಅದರಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ನಮ್ಮ ಅಭ್ಯರ್ಥಿಗಳ ಬಗ್ಗೆ ವಿವರಗಳಿವೆ. ನಾನು ಅವುಗಳನ್ನು ಮರಳಿ ತಂದಿದ್ದೇನೆ” ಎಂದು ಮಮತಾ ಬ್ಯಾನರ್ಜಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

More like this
Related

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು – ರಮೇಶ್ ಕಾಂಚನ್

ಉಡುಪಿ: ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು...

ಸೆ. 18 ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ, ಕಸ್ತೂರಿ ರಂಗನ್ ವರದಿ ಕುರಿತು ಸಭೆ

ಉಡುಪಿ: ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ...

ಸೆ. 17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್...

ದ್ವಿಚಕ್ರ ವಾಹನಕ್ಕೆ ಹಾಲು ಸಾಗಾಟದ ಟ್ಯಾಂಕರ್ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

ಸ್ವಗ್ರಾಮದಲ್ಲಿ ಚೌತಿ ಹಬ್ಬ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ದುರ್ಘಟನೆ ಮಂಡ್ಯ: ದ್ವಿಚಕ್ರ...

Copying is disabled on Udupi Digital News.