Saturday, May 30, 2026

ಕರ್ನಾಟಕ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಮತ್ತು ಬಿಹಾರ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬಿಹಾರದ ಒಂಬತ್ತು ಹಾಗೂ ಕರ್ನಾಟಕದ ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದ್ದು, ಜೂನ್ 18 ರಂದು ಮತದಾನ ಪ್ರಕ್ರಿಯೆ ಜರುಗಲಿದೆ.

ಎಂಎಲ್ ಸಿಗಳ ಅಧಿಕಾರಾವಧಿ ಮುಕ್ತಾಯ
ಬಿಹಾರ ಮತ್ತು ಕರ್ನಾಟಕದ ವಿಧಾನ ಪರಿಷತ್‌ನ ಒಟ್ಟು 16 ಸದಸ್ಯರ ಅಧಿಕಾರಾವಧಿಯು ಕ್ರಮವಾಗಿ ಜೂನ್ 28 ಮತ್ತು ಜೂನ್ 30 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಸದ್ಯ ಗೋವಿಂದ ರಾಜು, ನಾಸೀರ್ ಅಹ್ಮದ್, ಎನ್. ನಾಗರಾಜು (ಎಂ.ಟಿ.ಬಿ), ಪ್ರತಾಪ ಸಿಂಹ ನಾಯಕ್ ಕೆ, ತಿಪ್ಪಣ್ಣಪ್ಪ, ಸುನಿಲ್ ವಲ್ಯಾಪುರ ಹಾಗೂ ಬಿ.ಕೆ. ಹರಿಪ್ರಸಾದ್ ಅಧಿಕಾರಾವಧಿ ಮುಕ್ತಾಯವಾಗುತ್ತಿದೆ. ಇವರೆಲ್ಲರ ಅಧಿಕಾರಾವಧಿಯು ಜೂನ್ 30 ಕ್ಕೆ ಕೊನೆಗೊಳ್ಳಲಿದೆ. ಈ ತೆರವಾಗುವ ಸ್ಥಾನಗಳಿಗೆ ಹೊಸ ಸದಸ್ಯರನ್ನು ಆಯ್ಕೆ ಮಾಡಬೇಕಾಗಿದೆ.

ಜೂನ್ 18 ರಂದು ಫಲಿತಾಂಶ
ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಜೂನ್ 1 ರಂದು ಅಧಿಕೃತವಾಗಿ ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ತದನಂತರ ಜೂನ್ 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸುವ ಅಭ್ಯರ್ಥಿಗಳಿಗೆ ಜೂನ್ 11 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜೂನ್ 18 ರಂದು ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ಕಾರ್ಯವೂ ಪೂರ್ಣಗೊಂಡು ಫಲಿತಾಂಶ ಪ್ರಕಟವಾಗಲಿದೆ.

More like this
Related

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ...

ಐಪಿಎಲ್ 2026 ಫೈನಲ್: ಗುಜರಾತ್ ಟೈಟನ್ಸ್ ವಿರುದ್ಧ ಆರ್‌ಸಿಬಿ ಕಾದಾಟ ಇಂದು;

ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು 2022ರ ಚಾಂಪಿಯನ್ ಗುಜರಾತ್ ಟೈಟನ್ಸ್ ನಡುವೆ...

ಕೇರಳದಲ್ಲಿ ಭಾರೀ ಡ್ರಗ್ಸ್ ಜಾಲ ಭೇದನೆ; ₹70 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಆಪರೇಷನ್ ಚಕ್ರವ್ಯೂಹ’ ಅಡಿಯಲ್ಲಿ ಡಿಆರ್‌ಐ ಕಾರ್ಯಾಚರಣೆ; 24 ಕೆ.ಜಿ.ಗಿಂತ ಹೆಚ್ಚು ಮಾದಕ...

ಪತ್ನಿಯನ್ನು ಗಂಟೆಗಳ ಕಾಲ ‘ಕೋಳಿ’ ಭಂಗಿಯಲ್ಲಿ ನಿಲ್ಲಿಸಿ ಹಿಂಸೆ; ತಪ್ಪಿಸಿಕೊಂಡ ಬಳಿಕ ಚಾಕುವಿನಿಂದ ಇರಿದ ಪತಿ ಬಂಧನ

ಮುಂಬೈನಲ್ಲಿ ಅಮಾನುಷ ಘಟನೆ; ಪತ್ನಿಗೆ ಕತ್ತಿಯಿಂದ ಬೆದರಿಕೆ, ಆಸಿಡ್ ದಾಳಿ ಮಾಡುವುದಾಗಿ...

Copying is disabled on Udupi Digital News.