Sunday, September 13, 2026

ಗ್ಯಾಸ್ ಸಿಲಿಂಡರ್ ಸ್ಫೋಟ: ಐವರು ಕಾರ್ಮಿಕರಿಗೆ ಗಾಯ

ಯುಡಿ ನ್ಯೂಸ್ ಡಾಟ್ ಕಾಮ್

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಿಹಾರ ಮೂಲದ ಅಂಶುರಾಜ್ ಕುಮಾರ್ (18), ಹುಸೇನ್ ಖಾನ್ (21), ರೋಹಿತ್ ಚೌದರಿ (20), ಆರಬೇಗ್ ಆಲಂ (26) ಹಾಗೂ ಮುಜಾಫರ್ ಹುಸೇನ್ (19) ಎಂಬ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಐವರೂ ಚೊಕ್ಕಸಂದ್ರದಲ್ಲಿ ಒಂದೇ ರೂಮ್ ನಲ್ಲಿ ವಾಸವಿದ್ದರು. ರೂಮ್ ನಲ್ಲಿದ್ದ ಸಿಲಿಂಡರ್ ನಿಂದ ಅಡುಗೆ ಅನಿಲ ಸೋರಿಕೆ ಆಗಿರುವುದನ್ನು ಅರಿಯದೆ ಶುಕ್ರವಾರ ಬೆಳಿಗ್ಗೆ ಟೀ ಕಾಯಿಸಲು ಲೈಟರ್ ಹೊತ್ತಿಸಿದಾಗ ಅಗ್ನಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.