Tuesday, November 17, 2026

ದೆಹಲಿಯಲ್ಲಿ ಭೀಕರ ದುರಂತ: ಮನೆಯ ಮೇಲ್ಛಾವಣಿ ಕುಸಿದು ಮಗು ಸೇರಿ ಇಬ್ಬರು ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಮುಂಜಾನೆ ಭೀಕರ ಅವಘಡ ಸಂಭವಿಸಿದೆ. ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಮೂರು ವರ್ಷದ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಪೂರ್ವ ದೆಹಲಿಯ ಕಸ್ತೂರ್ಬಾ ನಗರದಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ಮೂರು ವರ್ಷದ ಮಗು ಹಾಗೂ 35 ವರ್ಷದ ಪಿಂಟು ಎಂದು ಗುರುತಿಸಲಾಗಿದೆ. ಮೇಲ್ಛಾವಣಿ ಕುಸಿದ ವೇಳೆ ಮನೆಯಲ್ಲಿ ಒಟ್ಟು ಎಂಟು ಮಂದಿ ಬಾಡಿಗೆದಾರರು ಇದ್ದರು ಎನ್ನಲಾಗಿದೆ. ಅವಘಡದಲ್ಲಿ ಇನ್ನೂ ಆರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿವೆ. ಸ್ಥಳೀಯ ನಿವಾಸಿಗಳೂ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಅಕ್ರಮ ಕಟ್ಟಡ ನಿರ್ಮಾಣವೇ ದುರಂತಕ್ಕೆ ಕಾರಣವೇ?:

ಘಟನಾ ಸ್ಥಳಕ್ಕೆ ಬಿಜೆಪಿ ಕೌನ್ಸಿಲರ್ ಪಂಕಜ್ ಲೂಥ್ರಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಟ್ಟಡ ಕುಸಿತಕ್ಕೆ ಅಕ್ರಮ ನಿರ್ಮಾಣ ಹಾಗೂ ಒತ್ತುವರಿಯೇ ಪ್ರಮುಖ ಕಾರಣ ಎಂದು ಅವರು ಆರೋಪಿಸಿದ್ದಾರೆ. ಕಟ್ಟಡ ನಿರ್ಮಾಣವಾಗಿರುವ ಜಾಗ ರೈಲ್ವೆ ಇಲಾಖೆಗೆ ಸೇರಿದ್ದಾಗಿದೆ. ಕಳೆದ ಐದರಿಂದ ಆರು ದಶಕಗಳಿಂದ ಈ ಪ್ರದೇಶದಲ್ಲಿ ಜನರು ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅವಶೇಷಗಳಡಿ ಸಿಲುಕಿರುವವರ ಪತ್ತೆಗಾಗಿ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

More like this
Related

ಐಪಿಎಲ್‌ ಗೆ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ: 2027ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೆಂಟರ್ ಆಗಿ ಹೊಸ ಜವಾಬ್ದಾರಿ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ದಿಗ್ಗಜ ಆಟಗಾರ, ಚೆನ್ನೈ ಸೂಪರ್...

ವಿದೇಶಿ ನೆಲದಲ್ಲಿ ಸಿಖ್ ಸಂಪ್ರದಾಯಕ್ಕೆ ಗೌರವ: ಐತಿಹಾಸಿಕ ಗುರುದ್ವಾರಕ್ಕೆ ಮೋದಿ ಭೇಟಿ

ಫಿಲಿಪೈನ್ಸ್: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಫಿಲಿಪೈನ್ಸ್ ಪ್ರವಾಸದ ವೇಳೆ...

ಮಂಗಳೂರು | ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲಟ್​ನ ಸಮಯ ಪ್ರಜ್ಞೆಯಿಂದ ಭಾರೀ...

ಬಾಲ್ಯದ ಕ್ರಿಕೆಟ್ ಅಂಗಳದಿಂದ ಉರಿಯುವ ಚಿತೆಯವರೆಗೆ: ಊರ ಮಗನ ಅಗಲಿಕೆಗೆ ಮಿಡಿದ ಪತ್ರಕರ್ತನ ಅಕ್ಷರಗಳು!

ಏಕೈಕ ಪುತ್ರನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಕಂಡು ಮನಕಲಕಿದ ಪತ್ರಕರ್ತನ ಭಾವನಾತ್ಮಕ...

Copying is disabled on Udupi Digital News.