Monday, November 2, 2026

ಜಾರ್ಖಂಡ್: ಎನ್ ಕೌಂಟರ್, ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದ್ದ ಅನಲ್ ದಾ ಸೇರಿ 15 ನಕ್ಸಲೀಯರ ಹತ್ಯೆ!

ಚೈಬಾಸಾ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸರಂದಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ಭಾರೀ ಎನ್‌ಕೌಂಟರ್‌ನಲ್ಲಿ ತಲೆಗೆ ₹1 ಕೋಟಿ ಬಹುಮಾನ ಘೋಷಿಸಲಾಗಿದ್ದ ಟಾಪ್ ನಕ್ಸಲ್ ನಾಯಕ ಪತಿರಾಮ್ ಮಾಂಝಿ ಅಲಿಯಾಸ್ ಅನಲ್ ದಾ ಸೇರಿದಂತೆ 15 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತರ ಹಲವು ನಕ್ಸಲೀಯರೊಂದಿಗೆ ಅನಲ್ ದಾ ಸಾವನ್ನಪ್ಪಿರುವುದನ್ನು ಜಾರ್ಖಂಡ್ ಪೊಲೀಸ್ ಐಜಿ ಎಸ್. ಮೈಕೆಲ್‌ರಾಜ್ ಖಚಿತಪಡಿಸಿದ್ದು, ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಯಾರಿದು ಅನಲ್ ದಾ?
ಗಿರಿದಿಹ್ ಜಿಲ್ಲೆಯ ಸ್ಥಳೀಯರಾದ ಅನಲ್ ದಾ ಕಳೆದ ಎರಡು ದಶಕಗಳಿಂದ ನಕ್ಸಲ್ ಚಳುವಳಿಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉನ್ನತ ನಾಯಕನಾಗಿದ್ದರು. ಗಿರಿದಿಹ್, ಬೊಕಾರೊ, ಹಜಾರಿಬಾಗ್, ಖುಂಟಿ, ಸೆರೈಕೆಲಾ-ಖಾರ್ಸಾವನ್ ಹಾಗೂ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಗಳಲ್ಲಿ ಅವರ ಪ್ರಭಾವ ಇತ್ತು ಎನ್ನಲಾಗಿದೆ. ಸರಂದಾ ಮತ್ತು ಕೊಲ್ಹಾನ್ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಭದ್ರತಾ ಪಡೆಗಳ ಮೇಲಿನ ದಾಳಿ, ಐಇಡಿ ಸ್ಫೋಟ, ಸುಲಿಗೆ, ಗುತ್ತಿಗೆದಾರರಿಗೆ ಬೆದರಿಕೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ಅನಲ್ ದಾ ವಿರುದ್ಧ ದಾಖಲಾಗಿದ್ದವು.

ಎನ್‌ಕೌಂಟರ್ ವಿವರ
ಗುಪ್ತಚರ ಮಾಹಿತಿಯ ಆಧಾರದಲ್ಲಿ ಭದ್ರತಾ ಪಡೆಗಳು ಇಂದು ಮುಂಜಾನೆ ಚೋಟಾನಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಬ್ಡಿಹ್ ಗ್ರಾಮದ ಬಳಿ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಗುಂಡಿನ ಚಕಮಕಿ ನಡೆಯಿತು. ಹಲವು ಗಂಟೆಗಳ ಕಾಲ ನಡೆದ ಎನ್‌ಕೌಂಟರ್ ಬಳಿಕ 15 ನಕ್ಸಲೀಯರು ಸಾವನ್ನಪ್ಪಿರುವುದು ಖಚಿತವಾಗಿದೆ ಎಂದು ಕೊಲ್ಹಾನ್ ವಿಭಾಗದ ಡಿಐಜಿ ಅನುರಂಜನ್ ಕಿಸ್ಪೊಟ್ಟಾ ತಿಳಿಸಿದ್ದಾರೆ.

ಇದು 2026ರ ಮೊದಲ ಪ್ರಮುಖ ನಕ್ಸಲ್ ವಿರೋಧಿ ಕಾರ್ಯಾಚರಣೆ ಆಗಿದ್ದು, ಭದ್ರತಾ ಪಡೆಗಳಿಗೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ.

More like this
Related

ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ: ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಉಡುಪಿ: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ...

 ಉಡುಪಿ ಜಿಲ್ಲಾ ಆಸ್ಪತ್ರೆ ಶೀಘ್ರ ಕಾರ್ಯಾರಂಭಕ್ಕೆ ಕ್ರಮ: ಯು.ಟಿ. ಖಾದರ್

ಉಡುಪಿ: ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು,...

ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನ ಚರಿತ್ರೆ ಅನಾವರಣ 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಲೋಕಾರ್ಪಣೆ. ನವೆಂಬರ್ 2ರಂದು ಮುಂಬೈನಲ್ಲಿ...

ಎರಡು ದಿನಗಳಲ್ಲಿ ಎಎಪಿ ಮೂವರು ಶಾಸಕರ ರಾಜೀನಾಮೆ: ಪಕ್ಷ ತೊರೆದ ಕುನ್ವರ್ ವಿಜಯ್ ಪ್ರತಾಪ್ ಸಿಂಗ್

ಚಂಡೀಗಢ: ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಮತ್ತೊಂದು ರಾಜಕೀಯ...

Copying is disabled on Udupi Digital News.