Wednesday, November 18, 2026

ಕುಲ್ಗಾಮ್ ಎನ್‌ಕೌಂಟರ್: ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಲತೀಫ್ ಭಟ್ ಹತನಾಗಿದ್ದಾನೆ. ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲಿನ ದಾಳಿಯ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಬುಧವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.

ಕುಲ್ಗಾಮ್‌ನಲ್ಲಿ ಬುಧವಾರ ಬೆಳಗ್ಗೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮಸೀದಿಯೊಂದರಲ್ಲಿ ಅಡಗಿದ್ದ ಲತೀಫ್ ಭಟ್‌ನನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದವು. ಆತ ಶರಣಾಗುವಂತೆ ಪೊಲೀಸರು ವಿಡಿಯೋ ಕರೆ ಮೂಲಕ ಮನವೊಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ನಡೆದ ಕಾರ್ಯಾಚರಣೆಯಲ್ಲಿ ಲತೀಫ್ ಭಟ್ ಹತನಾಗಿದ್ದಾನೆ.

‘ನನಗೆ ಅಲ್ಲಾಹನನ್ನು ಭೇಟಿಯಾಗಬೇಕು ಎಂದಿದ್ದ ಉಗ್ರ’:
ಲತೀಫ್ ಭಟ್‌ನನ್ನು ಶರಣಾಗುವಂತೆ ಮಾಡಲು ಅಧಿಕಾರಿಗಳು ವಿಡಿಯೋ ಕರೆ ಮೂಲಕ ಮಾತುಕತೆ ನಡೆಸಿದ್ದರು. ಈ ವೇಳೆ ಅಧಿಕಾರಿಯೊಬ್ಬರು, ‘ನಾವು ನಿನ್ನೊಂದಿಗಿದ್ದೇವೆ’ ಎಂದು ಧೈರ್ಯ ತುಂಬಿದ್ದರು. ಆದರೆ ಶರಣಾಗಲು ಒಪ್ಪದ ಲತೀಫ್, ‘ನಾನು ಅಲ್ಲಾಹನನ್ನು ಭೇಟಿಯಾಗಬೇಕು. ನನಗೆ ತುಂಬಾ ಸಂತೋಷವಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾನೆ ಎನ್ನಲಾಗಿದೆ.

ಸಹಚರ ಉಮರ್ ನಿಸಾರ್ ದಾರ್ ಕೂಡ ಹತ:
ಲತೀಫ್ ಭಟ್‌ನ ಸಹಚರ ಉಮರ್ ನಿಸಾರ್ ದಾರ್ ಸೋಮವಾರ ಕುಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ. ಈ ನಡುವೆ ಪೊಲೀಸರು ಮಂಗಳವಾರ ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ನವೆಂಬರ್ 11ರಂದು ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸುವ ಮುನ್ನ ಲತೀಫ್ ಭಟ್ ಮತ್ತು ಉಮರ್ ದಾರ್ ಸ್ಥಳದ ಪರಿಶೀಲನೆ ನಡೆಸುತ್ತಿರುವುದು ಕಂಡುಬಂದಿದೆ.

ನವೆಂಬರ್ 11ರಂದು ನಡೆದ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದರು. ಈ ದಾಳಿಯಲ್ಲಿ ಲತೀಫ್ ಭಟ್ ಮತ್ತು ಆತನ ಸಹಚರ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಹತ್ಯೆ ಪ್ರಕರಣದಲ್ಲೂ ಆರೋಪ:
ಸ್ಥಳೀಯವಾಗಿ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ಲತೀಫ್ ಭಟ್, ಜುಲೈ 22ರಂದು ಅನಂತನಾಗ್‌ನಲ್ಲಿ ಪೊಲೀಸರ ಮೇಲೆ ನಡೆದ ದಾಳಿಯಲ್ಲೂ ಭಾಗಿಯಾಗಿದ್ದ ಎಂಬ ಆರೋಪವಿದೆ. ಈ ದಾಳಿಯಲ್ಲಿ ಕರ್ತವ್ಯ ನಿರತ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

More like this
Related

ಬ್ಯಾಟರ್‌ಗಳಿಗಿಂತ ಬೌಲರ್‌ಗಳಿಗೇ ಗಾಳಿಯ ಕಾಟ: ನ್ಯೂಜಿಲೆಂಡ್‌ನಲ್ಲಿ ಟೀಂ ಇಂಡಿಯಾಗೆ ಹೊಸ ಸವಾಲು

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ನವೆಂಬರ್ 19ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗೆ ಭಾರತ...

ರಾಜ್ಯದ 5 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್!

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಐದು...

ನ. 22: ಉಡುಪಿ ಧರ್ಮಪ್ರಾಂತ್ಯದ ಪರಮ ಪ್ರಸಾದ ಮೆರವಣಿಗೆ

ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ...

ಒಡಿಶಾ: ಆತ್ಮಹತ್ಯೆಗೆ ಯತ್ನಿಸಿ ಬೆಂಕಿ ಹಚ್ಚಿಕೊಂಡ ಯುವತಿಗೆ ಗಂಭೀರ ಗಾಯ; ಮಾಜಿ ಪ್ರಿಯಕರ ಪೊಲೀಸ್ ವಶಕ್ಕೆ

ಭುವನೇಶ್ವರ: ಒಡಿಶಾದ ಭುವನೇಶ್ವರದ ಇನ್ಫೋಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದ...

Copying is disabled on Udupi Digital News.