Thursday, October 29, 2026

LPG ದರ ಪರಿಷ್ಕರಣೆ: 19 KG ವಾಣಿಜ್ಯ ಸಿಲಿಂಡರ್ ಬೆಲೆ ಬರೊಬ್ಬರಿ 993 ರೂ. ಏರಿಕೆ!

ಹೊಸದಿಲ್ಲಿ: ಗ್ರಾಹಕರಿಗೆ ಅಡುಗೆ ಅನಿಲ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಮೇ 1 ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 993 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯ ನಂತರ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 3,071.50 ರೂ., ಬೆಂಗಳೂರಿನಲ್ಲಿ 3154 ರೂ. ತಲುಪಿದೆ ಎಂದು ಮೂಲಗಳು ತಿಳಿಸಿವೆ.

ವಾಣಿಜ್ಯ ಸಿಲಿಂಡರ್ ಬೆಲೆ ಗಗನಕ್ಕೇರಿದ್ದರೂ, ಸಾಮಾನ್ಯ ಜನರಿಗೆ ಮತ್ತು ಗೃಹಬಳಕೆದಾರರಿಗೆ ಸದ್ಯಕ್ಕೆ ಯಾವುದೇ ಹೊರೆಯಾಗಿಲ್ಲ. 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬೆಂಗಳೂರಿನಲ್ಲಿ ಇದರ ಬೆಲೆ 915 ರೂಪಾಯಿಯಲ್ಲೇ ಮುಂದುವರಿದಿದೆ. ಕೊನೆಯದಾಗಿ ಮಾರ್ಚ್ 7 ರಂದು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡಲಾಗಿತ್ತು.

ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ದರ ಮತ್ತು ಕರೆನ್ಸಿ ವಿನಿಮಯ ದರಗಳನ್ನು ಆಧರಿಸಿ ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ.

ಒಂದೆಡೆ ಎಲ್‌ಪಿಜಿ ಬೆಲೆ ಏರಿಕೆಯಾಗುತ್ತಿದ್ದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಸಾಮಾನ್ಯ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 102.92 ರೂ. ಮತ್ತು ಡೀಸೆಲ್ ಬೆಲೆ 90.99 ರೂ. ರಷ್ಟಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದ ನಂತರ ಇಂಧನ ದರಗಳು ಸ್ಥಿರವಾಗಿವೆ.

More like this
Related

ನ. 1ರಂದು ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯ ಉದ್ಘಾಟನೆ

ಉಡುಪಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಇದರ ನವೀಕೃತ...

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ವರ್ಗಾವಣೆ, ಮಹೇಶ್ ಪಿ.ಎಸ್.  ಹೊಸ ಎಸಿ

ಕುಂದಾಪುರ: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ...

ಪರಿಶಿಷ್ಟ ಜಾತಿಯ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಿ: ಮಂಜುನಾಥ್ ಚೇರ್ಕಾಡಿ ಮನವಿ

ಉಡುಪಿ: ಉಡುಪಿ ಜಿಲ್ಲೆಯ ಏಳು ತಾಲೂಕು ಪಂಚಾಯತ್‌ಗಳು ಹಾಗೂ ಚೇರ್ಕಾಡಿ ಗ್ರಾಮ...

ಪರಿಶಿಷ್ಟ ಪಂಗಡದ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಸಿಗಬೇಕು: ಕೆ.ಟಿ. ನಾಯ್ಕ್

ಉಮೇಶ್ ನಾಯ್ಕ್ ಅವರ ಮನವಿ ನ್ಯಾಯಸಮ್ಮತ; ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ...

Copying is disabled on Udupi Digital News.