Saturday, May 30, 2026

ED ದುರುಪಯೋಗ ಆರೋಪಿಸಿ ಅಮಿತ್ ಶಾ ಕಚೇರಿ ಮುಂದೆ ಪ್ರತಿಭಟನೆ: ಡೆರೆಕ್ ಓ’ಬ್ರಿಯಾನ್, ಮಹುವಾ ಮೊಯಿತ್ರಾ ಸೇರಿ ಹಲವು ಟಿಎಂಸಿ ಸಂಸದರು ಪೊಲೀಸ್ ವಶಕ್ಕೆ

ಹೊಸದಿಲ್ಲಿ: ಕೋಲ್ಕತ್ತಾದ I-PAC ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಯನ್ನು ವಿರೋಧಿಸಿ ಮತ್ತು ಕೇಂದ್ರ ಸರಕಾರ ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ತೃಣಮೂಲ ಕಾಂಗ್ರೆಸ್ (TMC) ಸಂಸದರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಿಎಂಸಿ ಸಂಸದರಾದ ಡೆರೆಕ್ ಓ’ಬ್ರಿಯಾನ್, ಸತಾಬ್ದಿ ರಾಯ್, ಮಹುವಾ ಮೊಯಿತ್ರಾ, ಕೀರ್ತಿ ಆಝಾದ್ ಮತ್ತು ಇತರರು ದಿಲ್ಲಿಯ ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಅಮಿತ್‌ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ದಿಲ್ಲಿ ಪೊಲೀಸರು ಡೆರೆಕ್ ಓ’ಬ್ರಿಯಾನ್, ಮಹುವಾ ಮೊಯಿತ್ರಾ ಮತ್ತು ಇತರ ಸಂಸದರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

“ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ದಿಲ್ಲಿ ಪೊಲೀಸರು ಚುನಾಯಿತ ಸಂಸದರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ದೇಶ ನೋಡುತ್ತಿದೆ” ಎಂದು ಈ ವೇಳೆ ಮಹುವಾ ಮೊಯಿತ್ರಾ ಹೇಳಿದ್ದಾರೆ.

More like this
Related

ಧಾರ್ಮಿಕ ಕಾರ್ಯಕ್ರಮಗಳು ಸಮಾಜ ಸುಧಾರಣೆಗೆ ಸಹಕಾರಿಯಾಗಲಿ- ಪ್ರಸಾದ್ ರಾಜ್ ಕಾಂಚನ್

ಮಹಾರುದ್ರಯಾಗದ ಯಶಸ್ಸಿಗೆ ಶ್ರಮಿಸಿದವರಿಗೆ ಕೃತಜ್ಞತೆ ಸಲ್ಲಿಸುವ ಸಭೆ ಉಡುಪಿ: ಕೊಡವೂರು ಶ್ರೀ ಮಹತೋಭಾರ...

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ...

ಐಪಿಎಲ್ 2026 ಫೈನಲ್: ಗುಜರಾತ್ ಟೈಟನ್ಸ್ ವಿರುದ್ಧ ಆರ್‌ಸಿಬಿ ಕಾದಾಟ ಇಂದು;

ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು 2022ರ ಚಾಂಪಿಯನ್ ಗುಜರಾತ್ ಟೈಟನ್ಸ್ ನಡುವೆ...

ಕೇರಳದಲ್ಲಿ ಭಾರೀ ಡ್ರಗ್ಸ್ ಜಾಲ ಭೇದನೆ; ₹70 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಆಪರೇಷನ್ ಚಕ್ರವ್ಯೂಹ’ ಅಡಿಯಲ್ಲಿ ಡಿಆರ್‌ಐ ಕಾರ್ಯಾಚರಣೆ; 24 ಕೆ.ಜಿ.ಗಿಂತ ಹೆಚ್ಚು ಮಾದಕ...

Copying is disabled on Udupi Digital News.