Wednesday, May 13, 2026

ಟಿವಿಕೆಗೆ ಭರ್ಜರಿ ಜಯ: ಸರ್ಕಾರ ರಚನೆಗೆ ವಿಜಯ್ ಹಕ್ಕು ಮಂಡನೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ದಳಪತಿ ವಿಜಯ್ ಅವರ ಟಿವಿಕೆ (TVK) ಪಕ್ಷ ಮೊದಲ ಪ್ರಯತ್ನದಲ್ಲೇ ಭರ್ಜರಿ ಸಾಧನೆ ಮಾಡಿದ್ದು, 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮೊದಲ ಬಾರಿಗೆ ರಾಜಕೀಯ ಅಖಾಡಕ್ಕೆ ಇಳಿದ ವಿಜಯ್ ಅವರು ಭಾರೀ ಜನಮಂಡೇಟು ಪಡೆದುಕೊಂಡಿದ್ದು, ಬುಧವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಮಧ್ಯಾಹ್ನ ಸುಮಾರು 3.30ರ ಸುಮಾರಿಗೆ ಲೋಕಭವನಕ್ಕೆ ಆಗಮಿಸಿದ ವಿಜಯ್, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ಸಿದ್ಧವಿದ್ದೇವೆ ಎಂದು ಮನವಿ ಪತ್ರ ಸಲ್ಲಿಸಿದರು.

ಸರ್ಕಾರ ರಚನೆ ಕುರಿತಂತೆ ವಿಜಯ್ ರಾಜ್ಯಪಾಲರಿಗೆ ಪತ್ರ ಬರೆದು, ಮೇ 7ರಂದು ಬೆಳಗ್ಗೆ 11.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸಲು ಅನುಮತಿ ನೀಡುವಂತೆ ವಿನಂತಿಸಿದ್ದಾರೆ ಎಂದು ಟಿವಿಕೆ ಮೂಲಗಳು ತಿಳಿಸಿವೆ.

ಇದರ ನಡುವೆ, ಚೆನ್ನೈನ ನೆಹರೂ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸಮಾರಂಭಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

More like this
Related

 ಕುಂದಾಪುರ: ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಸಿಪಿಐ(ಎಂ) ಆಕ್ಷೇಪ

ಕುಂದಾಪುರ: ನಗರದ ಬೋರ್ಡ್ ಹೈಸ್ಕೂಲ್ ಪಕ್ಕದಲ್ಲಿರುವ ಪುರಸಭೆಗೆ ಸೇರಿದ ಜಾಗ ಸರ್ವೇ...

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ; ಇತರೆ ಧಾರ್ಮಿಕ ವಸ್ತ್ರಕ್ಕೂ ಅವಕಾಶ: ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ...

ಕುಂದಾಪುರ : ಶ್ರಮ ಸಂಹಿತೆ ಅಧಿಸೂಚನೆ ಪ್ರತಿ ದಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಕುಂದಾಪುರ: ಕೇಂದ್ರ ಸರ್ಕಾರವು ನಾಲ್ಕು ಶ್ರಮ ಸಂಹಿತೆಗಳಿಗೆ ನಿಯಮಾವಳಿಗಳನ್ನು ರೂಪಿಸಿ ರಾಜ್ಯ...

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರುಗೊಳಿಸಿರುವುದು ವಿರೋಧಿಸಿ ಬಿಜೆಪಿ ಪ್ರತಿಭಟನೆ

ಕುಂದಾಪುರ: ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಸರ್ಕಾರ ಮಂಜೂರುಗೊಳಿಸಿದ ಜಾಗವು ಈ ಹಿಂದೆ...

Copying is disabled on Udupi Digital News.