Monday, September 14, 2026

ಉತ್ತರಾಖಂಡ| ಕಮರಿಗೆ ಉರುಳಿದ ಬಸ್: 7 ಮಂದಿ ಮೃತ್ಯು, 11 ಜನರಿಗೆ ಗಾಯ

ಡೆಹ್ರಾಡೂನ್: ದ್ವಾರಾಹಾಟ್‌ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಇತರ 11 ಮಂದಿ ಗಂಭೀರ ಗಾಯಗೊಂಡಿದ್ದಾರೆ.

19 ಮಂದಿ ಪ್ರಯಾಣಿಕರಿದ್ದ ಈ ಬಸ್ ಬಿಕಿಯಾಸೈಣ ಪ್ರದೇಶದ ಸಲ್ಪಾನ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿತು. ವಿನಾಯಕ್ ಹಾದು ಹೋದ ಬಳಿಕ ಬಸ್ ದುರಂತಕ್ಕೀಡಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪೊಲೀಸರು ಹಾಗೂ ಸ್ಥಳೀಯಾಡಳಿತ ಸೇರಿದಂತೆ ಪರಿಹಾರ ಮತ್ತು ರಕ್ಷಣಾ ತಂಡಗಳು ಕಡಿದಾದ ಭೂಪ್ರದೇಶವನ್ನು ದಾಟಿ ಘಟನಾ ಸ್ಥಳ ತಲುಪಿವೆ.

‘‘ಬಸ್ ರಸ್ತೆಯಿಂದ ಸ್ಕಿಡ್ ಆಯಿತು ಹಾಗೂ ಕಂದರಕ್ಕೆ ಬಿದ್ದು ಸೆಕೆಂಡ್‌ಗಳಲ್ಲಿ ಕಾಣೆಯಾಯಿತು. ಬಸ್ ಬಿದ್ದ ಸದ್ದು ಭಯಾನಕವಾಗಿತ್ತು’’ ಎಂದು ನಿವಾಸಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ಅಲ್ಮೋರಾ ಎಸ್‌ಪಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.