Wednesday, April 15, 2026

ಕೆಕೆಆರ್ ಸೋಲಿನ ಜೊತೆ ನಾಯಕ ಅಜಿಂಕ್ಯ ರಹಾನೆಗೆ ಮತ್ತೊಂದು ಶಾಕ್: 12 ಲಕ್ಷ ರೂ. ದಂಡ

ಯುಡಿ ನ್ಯೂಸ್ ಡಾಟ್ ಕಾಮ್

ಚೆನ್ನೈ:
 2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಖಾತೆ ತೆರೆಯದ ಕೆಕೆಆರ್ ನಾಯಕನಿಗೆ ಮತ್ತೊಂದು ಶಾಕ್ ಎದುರಾಗಿದೆ. ಚೆನ್ನೈ ವಿರುದ್ಧದ ಸೋಲಿನ ಬಳಿಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ಈವರೆಗೂ ಗೆಲುವು ಕಾಣದ ಕೆಕೆಆರ್ ತಂಡ ಮಂಗಳವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ನಾಯಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಆಟಗಾರ ರುತುರಾಜ್ ಗಾಯಕ್‌ವಾಡ್ ವಿರುದ್ಧ ಅಗತ್ಯವಾದ ಓವರ್-ರೇಟ್ ಕಾಯ್ದುಕೊಳ್ಳಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್ ರೇಟ್‌ಗೆ ಸಂಬಂಧಿಸಿದ್ದು, ಮೊದಲ ಬಾರಿ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ (BCCI) ತಿಳಿಸಿದೆ.

ಈ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೂ 5 ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿಯೂ ಗೆಲುವು ಸಾಧಿಸಿಲ್ಲ. ಶುಕ್ರವಾರ (ಏ.17) ಗುಜರಾತ್ ಜೊತೆ ಕೆಕೆಆರ್ ತನ್ನ 6ನೇ ಪಂದ್ಯವನ್ನು ಆಡಲಿದೆ.

ನಿನ್ನೆಯ ಪಂದ್ಯದಲ್ಲಿ ಕೆಕೆಆರ್ ತಂಡ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಅನ್ಶುಲ್ ಕಂಬೋಜ್ ಎಸೆದ 2ನೇ ಓವರ್‌ನ 3ನೇ ಎಸೆತದಲ್ಲಿ ಫಿನ್ ಅಲೆನ್ 1 ರನ್ (3 ಎಸೆತ) ಗಳಿಸಿ ಸುಲಭ ಕ್ಯಾಚ್ ನೀಡಿ ಔಟಾದರು. ಕೇವಲ 2 ಓವರ್‌ಗಳಲ್ಲಿ 14 ರನ್ ಕಲೆಹಾಕಿ ಕೆಕೆಆರ್ ತಂಡದ ಮೊದಲ ವಿಕೆಟ್ ಪತನಗೊಂಡಿತು. ಖಲೀಲ್ ಅಹ್ಮದ್ ಎಸೆದ 5ನೇ ಓವರ್‌ನ 2ನೇ ಎಸೆತದಲ್ಲಿ ಸ್ಲಿಪ್‌ನಲ್ಲಿ ಕ್ಯಾಚ್ ನೀಡಿ ಸುನಿಲ್ ನರೈನ್ 24 ರನ್ (17 ಎಸೆತ, 2 ಬೌಂಡರಿ, 2 ಸಿಕ್ಸ್) ಗಳಿಸಿ ಔಟಾದರು. ಮೊದಲ 6 ಓವರ್‌ಗಳಲ್ಲಿ ಸಿಎಸ್‌ಕೆ ತಂಡ 2 ವಿಕೆಟ್ ಕಬಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ 7 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿ ಸೋಲು ಕಂಡಿತು.

More like this
Related

ಏಪ್ರಿಲ್ 20ರಂದು ಉಡುಪಿಯ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ಹಾಗೂ ಅಭಿಷೇಕ ಸಮಾರಂಭ

ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ...

ಮಂಡ್ಯದಲ್ಲಿ ನರೇಂದ್ರ ಮೋದಿ: ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ

ಯುಡಿ ನ್ಯೂಸ್ ಡಾಟ್ ಕಾಮ್ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ...

ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ: 350 ಅಶ್ಲೀಲ ವೀಡಿಯೋ ಇಟ್ಟುಕೊಂಡಿದ್ದ ಆರೋಪಿ ಅಂದರ್

ಯುಡಿ ನ್ಯೂಸ್ ಡಾಟ್ ಕಾಮ್ಮುಂಬೈ: ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ 180 ಅಪ್ರಾಪ್ತ...

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ

ಯುಡಿ ನ್ಯೂಸ್ ಡಾಟ್ ಕಾಮ್ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್...

Copying is disabled on Udupi Digital News.