Tuesday, September 15, 2026

ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ: ಜನವರಿ 11 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 15 ಸದಸ್ಯರ ಭಾರತ ತಂಡ ಪ್ರಕಟವಾಗಿದ್ದು, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ತಂಡಕ್ಕೆ ಮರಳಿದ್ದಾರೆ.

ಫಿಟ್ ನೆಸ್ ಸಮಸ್ಯೆಯಿಂದಾಗಿ ಈ ಇಬ್ಬರು ಆಟಗಾರರ ಬಗ್ಗೆ ಅನುಮಾನವಿತ್ತು. ಆದರೆ. ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಆ ಸಮಸ್ಯೆಯನ್ನು ಪರಿಹರಿಸಿದ ನಂತರ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಟೀಂ ಇಂಡಿಯಾದ ಆಲ್ ರೌಂಡರ್  ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಟಿ20 ವಿಶ್ವಕಪ್ ಸಮೀಪಿಸುತ್ತಿರುವುದರಿಂದ ಆಟಗಾರರ ಫಿಟ್ನೆಸ್ ಮತ್ತು ದೀರ್ಘಾವಧಿಯ ಸಿದ್ಧತೆಗೆ ಆಯ್ಕೆದಾರರು ಆದ್ಯತೆ ನೀಡಿದಂತೆ ಕಾಣುತ್ತಿದೆ. ಸ್ಟಾರ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಜನವರಿ 11 ರಿಂದ 31ರವರೆಗೂ ದೇಶದ ವಿವಿಧೆಡೆ ಪಂದ್ಯಗಳು ನಡೆಯಲಿವೆ. ನ್ಯೂಜಿಲೆಂಡ್ ವಿರುದ್ಧ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳು ಹಾಗೂ ಐದು ಟಿ-20 ಪಂದ್ಯಗಳನ್ನು ಭಾರತ ಆಡಲಿದೆ. ಜನವರಿ 11 ರಂದು ವಡೋದರಾದ BCA ಕ್ರೀಡಾಂಗಣದಲ್ಲಿ ಏಕದಿನ ಸರಣಿ ಆರಂಭವಾಗಲಿದೆ. ಇಂದೋರ್ ನಲ್ಲಿ ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 18 ರಂದು ನಿಗದಿಯಾಗಿದೆ.

ಏಕದಿನ ಪಂದ್ಯದ ನಂತರ ಜನವರಿ 21 ರಂದು ನಾಗ್ಪುರದಲ್ಲಿ ಟಿ-20 ಸರಣಿ ಆರಂಭವಾಗಲಿದೆ. ಬಳಿಕ ಜನವರಿ 23 ರಂದು ರಾಯಪುರದಲ್ಲಿ, ಜ.25 ರಂದು ಗುವಾಹಟಿಯಲ್ಲಿ ಮತ್ತು ಜ.28 ರಂದು ವಿಶಾಖಪಟ್ಟಣಂನಲ್ಲಿ ಜ.31 ರಂದು ತಿರುವನಂತಪುರಂನಲ್ಲಿ ಫೈನಲ್ ಟಿ-20 ಪಂದ್ಯ ನಡೆಯಲಿದೆ.

ಭಾರತಏಕದಿನತಂಡಇಂತಿದೆ. ಶುಭ್ ಮನ್ ಗಿಲ್ (ನಾಯಕ) ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್) ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್) ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.