Saturday, April 18, 2026

ಡಗೌಟ್‌ನಲ್ಲಿ ಫೋನ್‌ ಬಳಸಿದ್ದ ರಾಜಸ್ಥಾನ್‌ ರಾಯಲ್ಸ್‌ ಮ್ಯಾನೇಜರ್‌ಗೆ ಒಂದು ಲಕ್ಷ ರೂ. ದಂಡ

ಯುಡಿ ನ್ಯೂಸ್ ಡಾಟ್ ಕಾಮ್

ನವದೆಹಲಿ: ಮೊಬೈಲ್ ಫೋನ್ ಬಳಸಿ ಐಪಿಎಲ್ ಹಾಗೂ ಪಂದ್ಯದ ಅಧಿಕಾರಿಗಳಿಗೆ ಸಂಬಂಧಿಸಿದ ನಿಯಮವನ್ನು ಉಲ್ಲಂಘಿಸಿದ ಹಿನ್ನೆಲೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಒಂದು ಲಕ್ಷ ರು ದಂಡ ವಿಧಿಸಿ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದೆ.

ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಣ ಪಂದ್ಯದಲ್ಲಿ ಡಗೌಟ್ ನಲ್ಲಿ ಕುಳಿತಿದ್ದ ರೋಮಿ ಭಿಂದರ್ ಅವರು ಮೊಬೈಲ್ ಫೋನ್ ಬಳಸುತ್ತಿದ್ದಿದ್ದು ಖಚಿತವಾಗಿದೆ ಹಾಗೂ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ರೋಮಿ ಭಿಂದರ್ ಅವರು ಬಿಸಿಸಿಐಯ ಭಷ್ಟಾಚಾರ ನಿಯಂತ್ರಣ ಮಂಡಳಿ ಮುಂದೆ ವಿವರಿಸಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಇಂಡಿಯಾ ಟುಡೇಗೆ ಖಚಿತಪಡಿಸಿದ್ದಾರೆ.

ಭಿಂದರ್ ಅವರು ಭ್ರಷ್ಟಚಾರ ನಿಯಂತ್ರಣ ಮಂಡಳಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡುತ್ತಾ ಘಟನೆಯ ಹಿನ್ನೆಲೆಯನ್ನು ವಿವರಿಸಿದರು. ಆದರೆ ಅವರ ಸ್ಪಷ್ಟೀಕರಣವು ಎಸಿಯುಗೆ ಸಂಪೂರ್ಣ ತೃಪ್ತಿಕರವಾಗಿರಲಿಲ್ಲ. ಇದರ ಹಿನ್ನೆಲೆಯಲ್ಲಿ, ಸಂಬಂಧಿತ ಘಟನೆಯ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಎಸಿಯು ಶಿಫಾರಸು ಮಾಡಿದೆ.

ಈ ಹಿನ್ನೆಲೆಯಲ್ಲಿ ಆರ್ಆರ್ ತಂಡದ ಮ್ಯಾನೇಜರ್ ಗೆ 1 ಲಕ್ಷ ರು ದಂಡವನ್ನು ವಿಧಿಸಲಾಗಿದ್ದು, ಮುಂದಿನ ಆವೃತ್ತಿಗಳಲ್ಲಿ ಇಂತಹ ಉಲ್ಲಂಘನೆಗಳನ್ನು ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದೆ. ಇದೇ ವೇಳೆ ಬಿಸಿಸಿಐ ಪಿಎಂಒಎ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಕಡ್ಡಾಯವೆಂದು ಪುನರುಚ್ಚರಿಸಿದ್ದು, ಯಾವುದೇ ಉಲ್ಲಂಘನೆ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.

ಏಪ್ರಿಲ್ 10 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಣ ಪಂದ್ಯದ ಸಮಯದಲ್ಲಿ ಟಿವಿ ಕ್ಯಾಮೆರಾಗಳು ರೋಮಿ ಭಿಂದರ್ ಡಗೌಟ್ ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯಗಳನ್ನು ಸೆರೆಹಿಡಿದ ನಂತರ ಈ ವಿವಾದ ಬೆಳಕಿಗೆ ಬಂದಿತ್ತು.

ಐಪಿಎಲ್ ನಿಯಮಗಳ ಪ್ರಕಾರ, ಡಗೌಟ್ ಪ್ರದೇಶದಲ್ಲಿ ಮೊಬೈಲ್ ಫೋನ್ ಹಾಗೂ ಇತರೆ ಸಂವಹನ ಸಾಧನಗಳ ಬಳಕೆ ಸಂಪೂರ್ಣ ನಿಷೇಧಿತವಾಗಿದೆ. ಈ ಪ್ರದೇಶವು ಪಿಎಂಒಎ (PMOA) ನಿಯಂತ್ರಿತ ವಲಯಕ್ಕೆ ಒಳಪಟ್ಟಿದ್ದು, ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಎಲ್ಲರೂ ಅಂಗಣಕ್ಕೆ ಪ್ರವೇಶಿಸುವುದಕ್ಕೂ ಮುನ್ನ ತಮ್ಮ ಫೋನ್ ಗಳನ್ನು ನೀಡಬೇಕಾಗುತ್ತದೆ. ಆದರೆ, ಕೆಲ ವಿಶೇಷ ಸಂದರ್ಭಗಳಲ್ಲಿ ಮಾತ್ರ ಸೀಮಿತ ವಿನಾಯಿತಿಯನ್ನು ನೀಡಲಾಗುತ್ತದೆ.

More like this
Related

ಪ್ರಾಚ್ಯ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳ ಅರಿವು ಮಹತ್ವ: ಪತ್ರಕರ್ತ ಪ್ರಶಾಂತ ಪಾದೆ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ಶ್ರಮ ಸಂಸ್ಕೃತಿಯ ಪ್ರತೀಕವಾದ ಪ್ರಾಚ್ಯ ವಸ್ತುಗಳ...

ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಯುಡಿ ನ್ಯೂಸ್ ಡಾಟ್ ಕಾಮ್ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಯೋಗೇಶ್‌...

ಕುಂದಾಪುರ: ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ಇಲ್ಲಿನ ಡಾ.ಬಿ. ಬಿ. ಹೆಗ್ಡೆ ಪ್ರಥಮ...

ಕುಂದಾಪುರ: ಬಿಜೆಪಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್....

Copying is disabled on Udupi Digital News.