Tuesday, September 15, 2026

ಡಿವೈ ಪಾಟೀಲ್‌ನಲ್ಲಿ ಆರ್‌ಸಿಬಿ ಅಬ್ಬರ; ರಾಧಾ ಯಾದವ್–ರಿಚಾ ಘೋಷ್ ಶತಕದ ಜೊತೆಯಾಟ

ನವಿ ಮುಂಬೈ: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 183 ರನ್‌ಗಳ ಭರ್ಜರಿ ಮೊತ್ತ ಕಲೆಹಾಕಿದೆ.

ಆರ್‌ಸಿಬಿ ತಂಡ ಈ ದೊಡ್ಡ ಮೊತ್ತ ದಾಖಲಿಸುವಲ್ಲಿ ಆಲ್‌ರೌಂಡರ್ ರಾಧಾ ಯಾದವ್ ಅವರ ಅಸಾಧಾರಣ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಆರಂಭದಲ್ಲೇ ಆರ್‌ಸಿಬಿ ಕೇವಲ 43 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಬ್ಯಾಟಿಂಗ್‌ಗೆ ಬಂದ ರಾಧಾ ಯಾದವ್, ರಿಚಾ ಘೋಷ್ ಅವರೊಂದಿಗೆ ಇನ್ನಿಂಗ್ಸ್‌ನ್ನು ಚೇತರಿಸಿದರು.

ಐದನೇ ವಿಕೆಟ್‌ಗೆ ಈ ಜೋಡಿ 66 ಎಸೆತಗಳಲ್ಲಿ 105 ರನ್‌ಗಳ ಅಮೂಲ್ಯ ಜೊತೆಯಾಟವನ್ನಾಡಿ ತಂಡವನ್ನು 148 ರನ್‌ಗಳಿಗೆ ಕೊಂಡೊಯ್ದಿತು. ರಿಚಾ ಘೋಷ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 44 ರನ್ ಗಳಿಸಿದರೆ, ರಾಧಾ ಯಾದವ್ 47 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 66 ರನ್‌ಗಳ ಆಕರ್ಷಕ ಇನ್ನಿಂಗ್ಸ್ ಆಡಿದರು. ಇದು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಧಾ ಯಾದವ್ ಅವರ ಚೊಚ್ಚಲ ಅರ್ಧಶತಕವಾಗಿದೆ.

ಇನ್ನು ಅಂತಿಮ ಹಂತದಲ್ಲಿ ನಾಡಿನ್ ಡಿ ಕ್ಲರ್ಕ್ ಕೂಡ ವೇಗದ ಆಟ ಪ್ರದರ್ಶಿಸಿ, 12 ಎಸೆತಗಳಲ್ಲಿ 26 ರನ್‌ಗಳನ್ನು ಬಾರಿಸಿ ತಂಡದ ಮೊತ್ತವನ್ನು ಇನ್ನಷ್ಟು ಹೆಚ್ಚಿಸಿದರು.

ನಿಗದಿತ ಓವರ್‌ಗಳ ಅಂತ್ಯಕ್ಕೆ ಆರ್‌ಸಿಬಿ 183 ರನ್‌ಗಳನ್ನು ಕಲೆಹಾಕಿ, ಗುಜರಾತ್ ಜೈಂಟ್ಸ್ ತಂಡಕ್ಕೆ ಕಠಿಣ ಗುರಿಯನ್ನು ನೀಡಿದೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.