Wednesday, January 7, 2026

ಬಳ್ಳಾರಿ ಗಲಾಟೆ-ಫೈರಿಂಗ್ ಕೇಸ್: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ಗಳು ಸೇರಿ 26 ಮಂದಿ ಬಂಧನ

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಗಲಾಟೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ದಿಯ ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಪಂಜಾಬ್ ಮೂಲದವರಾದ ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್ ಹಾಗೂ ಗುರುಚರಣ ಸಿಂಗ್ ಬಂಧಿತ ಗನ್ ಮ್ಯಾನ್ ಗಳು.

ಜನವರಿ 1ರಂದು ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ ಈ ಮೂವರು ಗನ್ ಮ್ಯಾನ್ ಗಳು ಗಾಳಿಯಲ್ಲಿ ಫೈರಿಂಗ್ ಮಾಡಿದ್ದರು. ಮೂವರು ಗನ್‌ಮ್ಯಾನ್‌ಗಳು ಸೇರಿ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಇದೇ ಪ್ರಕರಣ ಸಂಬಂಧ 10 ಬಿಜೆಪಿ ಕಾರ್ಯಕರ್ತರನ್ನೂ ಬಂಧಿಸಲಾಗಿದೆ. ಬಂಧಿತ ಗನ್ ಮ್ಯಾನ್ ಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಬ್ರೂಸ್ ಪೇಟೆ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಬಿಜೆಪಿ ಕಾರ್ಯಕರ್ತರನ್ನು ಬಳ್ಳಾರಿಯ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

More like this
Related

ಪೊಲೀಸರು ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ; ವ್ಯಾನ್‌ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ – ಶಶಿಕುಮಾರ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಪೊಲೀಸರು ತಮ್ಮ ಕಾರ್ಯಕರ್ತೆಯನ್ನು ಬಂಧಿಸಿ ಆಕೆಯ ಮೇಲೆ ಹಲ್ಲೆ...

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ರಾಮಲೀಲಾ ಮೈದಾನ ಪ್ರದೇಶದ ಮಸೀದಿ ಬಳಿ...

ಸಾಲಿಗ್ರಾಮ ಡಿವೈನ್ ಪಾರ್ಕ್ ಸ್ಥಾಪಕ ಎ.ಚಂದ್ರಶೇಖರ್ ನಿಧನ

ಬ್ರಹ್ಮಾವರ: ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸಾರಕ್ಕಾಗಿ ಸಾಲಿಗ್ರಾಮದಲ್ಲಿ ಡಿವೈನ್ ಪಾರ್ಕ್ ಸ್ಥಾಪಿಸಿದ್ದ...

ಟಿಪ್ಪರ್ ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಮರಳು ತುಂಬಿದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ...

Copying is disabled on Udupi Digital News.

Discover more from Udupi Digital News

Subscribe now to keep reading and get access to the full archive.

Continue reading