Tuesday, September 15, 2026

ಬಳ್ಳಾರಿ ಫೈರಿಂಗ್ ಪ್ರಕರಣ: ಎಸ್ಪಿ ಪವನ್ ನೆಜ್ಜೂರ್ ಅಮಾನತು


ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿರುವ ಹಿನ್ನೆಲೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿದೆ.

ಗುರುವಾರವಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಪವನ್ ನೆಜ್ಜೂರ್ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿರುವುದು ಪೊಲೀಸ್ ಇಲಾಖೆಯಲ್ಲಿ ಅಚ್ಚರಿ ಮೂಡಿಸಿದೆ.

ಬ್ಯಾನರ್ ವಿವಾದವನ್ನು ಸರಿಯಾಗಿ ನಿಭಾಯಿಸುವಲ್ಲಿ ಎಸ್ಪಿ ವಿಫಲರಾಗಿದ್ದಾರೆ. ಈ ಘಟನೆ ನಡೆದ ಬಳಿಕ ಮೇಲಾಧಿಕಾರಿಗಳಿಗೆ ಸಮಯಕ್ಕೆ ಸರಿಯಾಗಿ ಹಾಗೂ ಸಂಪೂರ್ಣ ಮಾಹಿತಿ ನೀಡಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಮಾನತು ಶಿಕ್ಷೆ ವಿಧಿಸಲಾಗಿದೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.