Friday, October 30, 2026

ಭದ್ರಾವತಿ | ಸೇತುವೆಯಿಂದ ಉರುಳಿಬಿದ್ದ ಬಸ್: ಹಲವರಿಗೆ ಗಾಯ

ಶಿವಮೊಗ್ಗ: ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಕಾಗೆಹಳ್ಳ ಎಂಬಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆಯಿಂದ ಹೊರಟಿದ್ದ ಬಸ್ ಚನ್ನಗಿರಿ ದಾಟಿ ಕಾಗೇಹಳ್ಳ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಸಂದರ್ಭ ಬಸ್ನಲ್ಲಿ 35 ಮಂದಿ ಪ್ರಯಾಣಿಕರಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಕಾಲು ಮುರಿದಿದ್ದರೆ, ಮೂರ್ನಾಲ್ಕು ಮಂದಿಗೆ ತೀವ್ರತರದ ಗಾಯಗಳಾಗಿವೆ.

ಬಸ್ ಚಾಲಕನಿಗೂ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಸ್ಥರು ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಗಾಯಾಳುಗಳನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

More like this
Related

ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಹಡಗಿಗೆ ಬೆಂಕಿ

ಟೆಹರಾನ್: ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು...

ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಳ ಮಾಡಲು...

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್...

Copying is disabled on Udupi Digital News.