Monday, September 14, 2026

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್ ಗೆ ಬಿಗ್ ಟ್ವಿಸ್ಟ್: ಕುಣಿಗಲ್ ನಲ್ಲಿ ಲವರ್ ಮನೆಯಲ್ಲಿ ಪತ್ತೆ!

ತುಮಕೂರು: ವಿವಾಹ ಸಮಾರಂಭದಲ್ಲಿ ಭಾಗವಹಿಸುವುದಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದ ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಮಹಿಳೆ ಕುಣಿಗಲ್ ನಲ್ಲಿ ಆಕೆಯ ಲವರ್ ಮನೆಯಲ್ಲಿರುವುದು ಪತ್ತೆಯಾಗಿದೆ.

ಹೌದು.. ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಪೊಲೀಸರು ತಾರ್ಕಿಕ ಅಂತ್ಯ ಹಾಡಿದ್ದು, ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸರು ಖಚಿತಪಡಿಸಿದ್ದು, ಆ ಮೂಲಕ ಮಹಿಳೆ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ಮದುವೆಗೆ ಬಂದಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ ಪ್ರಿಯಾಂಕಾ (28) ನಾಪತ್ತೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪ್ರಿಯಾಂಕಾ ನಾಪತ್ತೆಯಾದ ಸ್ಥಳದಲ್ಲಿ ಅವರ ಬಟ್ಟೆಗಳು, ಚಪ್ಪಲಿ, ಒಳಉಡುಪು ಮತ್ತು ವ್ಯಾನಿಟಿ ಬ್ಯಾಗ್ ಪತ್ತೆಯಾಗಿತ್ತು. ಹೀಗಾಗಿ ಪ್ರಿಯಾಂಕಾ ಅವರ ಕೊಲೆ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಆದರೆ ತನಿಖೆ ಮುನ್ನಡೆಸಿದ್ದ ಪೊಲೀಸರು ಶೋಧ ತೀವ್ರಗೊಳಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್​​ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ ಮಹಿಳೆಯನ್ನು ಪೊಲೀಸರು ಪತ್ತೆ ಮಾಡಿದ್ದು, ಬೇಲೂರು ಪೊಲೀಸರಿಗೆ ಸ್ಥಳೀಯ ಪೊಲೀಸರು ಕೂಡ ಈ ವೇಳೆ ಸಾಥ್​ ನೀಡಿದ್ದಾರೆ. ಡೇವಿಡ್​​ ಮನೆಯಲ್ಲಿಯೇ ಪ್ರಿಯಾಂಕಾ ಎರಡು ದಿನಗಳಿಂದ ವಾಸವಿದ್ದರು ಎನ್ನಲಾಗಿದೆ.

ಆತ್ಮಹತ್ಯೆ ನಾಟಕ ಸೃಷ್ಟಿ

ಮೇಲ್ನೋಟಕ್ಕೆ ಮಹಿಳೆ ಪ್ರಿಯಾಂಕಾ ತನ್ನ ಲವರ್ ಜೊತೆಗಿರಲು ತನ್ನದೇ ಆತ್ಮಹತ್ಯೆ ನಾಟಕ ಸೃಷ್ಟಿದ್ದಳು ಎಂದು ಆರೋಪಿಸಲಾಗಿದೆ. ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಸೀನ್ ಕ್ರಿಯೇಟ್​​ ಮಾಡಿದ್ದ ಪ್ರೀಯಾಂಕಾ ತನ್ನ ವಸ್ತುಗಳನ್ನು ಬಿಸಾಡಿದ್ದರು. ಇದರ ಜಾಡು ಹಿಡಿದಿದ್ದ ಬೇಲೂರು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು.

ಆದರೆ ಪೊಲೀಸರ ಸತತ ಪ್ರಯತ್ನದಿಂದ ಕೊನೆಗೂ ಪತಿಯ ಸ್ನೇಹಿತನಾಗಿರುವ ಡೇವಿಡ್​​ ಮನೆಯಲ್ಲಿ ಮಹಿಳೆಯ ಪತ್ತೆಯಾಗಿದೆ. ಕುಣಿಗಲ್ ಪಟ್ಟಣದ ಗೊಟ್ಟಿಕೆರೆಯಲ್ಲಿ ವಾಸವಾಗಿದ್ದ ಡೇವಿಡ್ ಪಟ್ಟಣದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರ ತನಿಖೆ ವೇಳೆ ಸಿಕ್ಕಿದೆ.

ಏನಿದು ಘಟನೆ?

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ್ದ ವೇಳೆ ಕಾಣೆಯಾಗಿದ್ದರು. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಈಕೆ ನಿಗೂಢವಾಗಿ ನಾಪತ್ತೆಯಾಗಿದ್ದಳು.

ಘಟನೆಗೂ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ ಸಿಕ್ಕಿದ್ದೇನೆ’ ಎಂದು ಹೇಳಿ ಫೋನ್ ಕಟ್ ಮಾಡಿದ್ದರು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬೇಲೂರು ತಾಲೂಕಿನ ಕಲ್ಕೆರೆ ಸಮೀಪ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ಮತ್ತಷ್ಟು ಸಂಶಯ ಮೂಡುವಂತೆ ಮಾಡಿತ್ತು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.