Saturday, May 16, 2026

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಯುವ ಮೋರ್ಚಾದಿಂದ ‘ಗೋ ಬ್ಯಾಕ್’ ಪ್ರತಿಭಟನೆ

ಉಡುಪಿ, : ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ‘ಗೋ ಬ್ಯಾಕ್’ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ರಾಜ್ಯ ಸರ್ಕಾರ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

“2013ರಲ್ಲಿ ಉಡುಪಿ ನಗರ ಭಾಗದಲ್ಲಿ ಆರಂಭವಾದ ನರ್ಮ್ ಬಸ್ ಯೋಜನೆಯಲ್ಲಿ 40ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಆದರೆ ಈಗ ಗ್ಯಾರಂಟಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿಗೆ ತಂದ ನಂತರ ಶೇ.50ರಷ್ಟು ಬಸ್‌ಗಳನ್ನು ಕಡಿತಗೊಳಿಸಲಾಗಿದೆ,” ಎಂದು ಅವರು ದೂರಿದರು.

ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸದಿರುವುದರಿಂದ ಬಡ ರೋಗಿಗಳ ಜೀವದೊಂದಿಗೆ ಸರ್ಕಾರ ಆಟವಾಡುತ್ತಿದೆ ಎಂದು ಆರೋಪಿಸಿದ ಅವರು, ಉಡುಪಿ ಪರ್ಯಾಯ ಮಹೋತ್ಸವಕ್ಕೆ ಅನುದಾನ ನೀಡುವ ಭರವಸೆ ನೀಡಿ ಬಳಿಕ ನೆರವು ನೀಡದಿರುವುದನ್ನೂ ಖಂಡಿಸಿದರು.

ಇದೇ ವೇಳೆ, ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರತಿಭಟನಾಕಾರರು “ಗೋ ಬ್ಯಾಕ್” ಘೋಷಣೆಗಳನ್ನು ಕೂಗಿದರು. ಬಳಿಕ ಕೆಲ ಕಾರ್ಯಕರ್ತರು ರಸ್ತೆಗಿಳಿಯಲು ಯತ್ನಿಸಿದಾಗ ಪೊಲೀಸರು ತಡೆದರು.

ಘಟನೆಯ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸಂಧ್ಯಾ ರಮೇಶ್, ಅಭಿರಾಜ್ ಸುವರ್ಣ, ಶಿವಕುಮಾರ್ ಅಂಬಲಪಾಡಿ, ಸಚಿನ್ ಸುವರ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

More like this
Related

ಟಿ20 ವಿಶ್ವಕಪ್‌ಗೆ ಮುನ್ನ ಮಹಾಕಾಳ ದೇವರ ದರ್ಶನ ಪಡೆದ ಭಾರತೀಯ ಮಹಿಳಾ ಕ್ರಿಕೆಟ್ ತಂಡ

ಉಜ್ಜಯಿನಿ: ಮುಂದಿನ ತಿಂಗಳು ಆರಂಭವಾಗಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ...

ರಾಷ್ಟ್ರೀಯ ಡಬಲ್ಸ್ ಸ್ಕ್ವಾಶ್ ಚಾಂಪಿಯನ್‌ಶಿಪ್: ವೆಲವನ್ ಸೆಂಥಿಲ್‌ಕುಮಾರ್, ಜೋಶ್ನಾ ಚಿನ್ನಪ್ಪಗೆ ಡಬಲ್ ಕಿರೀಟ

ಚೆನ್ನೈ, : ಮೂರನೇ ರಾಷ್ಟ್ರೀಯ ಡಬಲ್ಸ್ ಸ್ಕ್ವಾಶ್ ಚಾಂಪಿಯನ್‌ ಶಿಪ್‌ನಲ್ಲಿ ವೆಲವನ್...

ಶಿಷ್ಟಾಚಾರ ಉಲ್ಲಂಘನೆ, ಮುಂದೆಯೂ ಇದೇ ರೀತಿಯಾದ್ರೆ ಸಸ್ಪೆಂಡ್ ಮಾಡ್ತೀನಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾರ್ನಿಂಗ್

ಉಡುಪಿ: ಶಿಷ್ಟಾಚಾರ ಪ್ರಕಾರ ಅಧಿಕಾರಿಗಳು ಶಾಸಕರಿಗೆ ಗೌರವ ಕೊಡುವುದನ್ನು ಕೊಡಬೇಕು. ಪ್ರತಿ...

Copying is disabled on Udupi Digital News.