Sunday, June 21, 2026

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರ

ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಭಾನುವಾರ (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೆಪಿಸಿಸಿ ಪಟ್ಟಾಭಿಷೇಕ ಮಾಡಲಾಯ್ತು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಹಿರಿಯ ಕಾರ್ಯಕರ್ತ ಹರಿಪ್ರಸಾದ್ಗೆ ಅಧಿಕಾರ ಹಸ್ತಾಂತರಿಸಿದ್ದೇನೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ . ಶಕ್ತಿ ಮೀರಿ ನನ್ನ ಕಾರ್ಯಕರ್ತರಿಗೆ ಸೇವೆ ಮಾಡಿದ್ದೇನೆ ಸೋನಿಯಾ ಗಾಂಧಿಯವರ ಆಶೀರ್ವಾದ ನಾನು ಮರೆಯುವುದಿಲ್ಲ. ಕೊವಿಡ್ ಸಂದರ್ಭದಲ್ಲೂ ಮೇಕೆದಾಟು ಪಾದಯಾತ್ರೆ ಮಾಡಿದ್ದೆವು.ಕೇವಲ ಸಿದ್ದರಾಮಯ್ಯ ಹಾಗೂ ನನ್ನಿಂದ 136 ಸೀಟ್ಗಳನ್ನ ಗೆದ್ದಿಲ್ಲ. ನಿಮ್ಮೆಲ್ಲರ ಶಕ್ತಿಯಿಂದ 136 ಸೀಟ್ಗಳನ್ನು ಗೆಲ್ಲಲು ಸಾಧ್ಯವಾಯ್ತು ಎಂದರು.

More like this
Related

ಸುಳ್ಯ| ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತ್ಯು

ಸುಳ್ಯ: ಮನೆಯ ಸಮೀಪದ ಕೆರೆಯ ಬಳಿ ಆಟವಾಡುತ್ತಿದ್ದ ಅವಳಿ ಮಕ್ಕಳು ಆಕಸ್ಮಿಕವಾಗಿ...

ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು ಕಾಂಗ್ರೆಸ್ ಸ್ವಾಗತ

ಕುಂದಾಪುರ: ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ....

MRG ಗ್ರೂಪ್ ಮಾಲೀಕ ಪ್ರಕಾಶ್ ಶೆಟ್ಟಿಯಿಂದ ಐಷಾರಾಮಿ ‘ಎಂಬ್ರೇಯರ್ ಲೆಗಸಿ 650’ ಖಾಸಗಿ ಜೆಟ್ ಖರೀದಿ!

ಮಂಗಳೂರು: ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್...

Copying is disabled on Udupi Digital News.