Tuesday, September 15, 2026

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸ್ ದಾಳಿ: ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕೇಂದ್ರ ಅಪರಾಧಿ ವಿಭಾಗ (ಸಿಸಿಬಿ)ದ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್ ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಜೈಲಿನಲ್ಲಿ ಪ್ರಭಾವಿ ಹಾಗೂ ಇತರ ಕೈದಿಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಅಪರಾಧಿ ವಿಭಾಗವು(ಸಿಸಿಬಿ) ನಡೆಸಿದ ಐದು ಗಂಟೆಗಳ ಸುದೀರ್ಘ ದಾಳಿ ನಡೆಸಿದೆ. ಈ ವೇಳೆ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಜೈಲು ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಸಿಸಿಬಿ ದಾಳಿ ನಡೆಸಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಅವರಿರುವ ಬ್ಯಾರಕ್ ನಿಂದ ಒಂದು ಆಂಡ್ರಾಯ್ಡ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಸಿಸಿಬಿ ವತಿಯಿಂದ ಕಾರಾಗೃಹದಲ್ಲಿನ ಪ್ರಮುಖ ಕೈದಿಗಳು ಹಾಗೂ ಇತರ ಕೈದಿಗಳ ಮೇಲೆ ನಡೆಸಲಾದ 4-5 ಗಂಟೆಗಳ ಶೋಧ ಕಾರ್ಯಾಚರಣೆಯ ವೇಳೆ ಬೇರೆ ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

More like this
Related

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.