Friday, May 1, 2026

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಗೆ ಕೇಂದ್ರವೇ ಹೊಣೆ: ಡಿಕೆ ಶಿವಕುಮಾರ್

ಬೆಂಗಳೂರು,: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ನಗರದ ಗಾಂಧಿನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ ಸಂಕಷ್ಟವನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದರು.

“ಎಲ್ಲಾ ವಸ್ತುಗಳ ಬೆಲೆ ಆಕಾಶಕ್ಕೇರಿದೆ. ಆದರೆ ಜನರ ಆದಾಯ ಮಾತ್ರ ಕುಸಿದಿದೆ. ಈ ಬೆಲೆ ಏರಿಕೆಗೆ ಹೊಣೆ ಯಾರು?” ಎಂದು ಪ್ರಶ್ನಿಸಿದರು.

ವಾಣಿಜ್ಯ ಸಿಲಿಂಡರ್ ದರ ಏರಿಕೆಯ ಪರಿಣಾಮ ನೇರವಾಗಿ ಜನರ ಮೇಲೆ ಬೀಳುತ್ತಿದೆ. ಅನೇಕ ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

“ಜನರ ಮೇಲಿನ ಹೊರೆ ಕಡಿಮೆ ಮಾಡಿ, ಬೆಲೆ ಏರಿಕೆಯನ್ನು ನಿಯಂತ್ರಿಸುವ ಕ್ರಮ ಕೈಗೊಳ್ಳಬೇಕು. ಜನರು ನೆಮ್ಮದಿಯಿಂದ ಬದುಕುವಂತಾಗಬೇಕು,” ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಪ್ರಸ್ತುತ ಯುದ್ಧ ಪರಿಸ್ಥಿತಿಯಲ್ಲಿ ಮಿತ್ರ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಶಿವಕುಮಾರ್ ಅಭಿಪ್ರಾಯಪಟ್ಟರು.

“ಹಲವು ದೇಶಗಳು ಭಾರತಕ್ಕೆ ಬೆಂಬಲ ಸೂಚಿಸಿವೆ. ನಮ್ಮ ವಿದೇಶಾಂಗ ನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು,” ಎಂದು ಹೇಳಿದರು.

ಅಲ್ಪಸಂಖ್ಯಾತರ ಅನುದಾನ ವಿಚಾರಕ್ಕೆ ಪ್ರತಿಕ್ರಿಯೆ

ಅಲ್ಪಸಂಖ್ಯಾತರ ಪ್ರದೇಶ ಅಭಿವೃದ್ಧಿಗೆ ₹600 ಕೋಟಿ ಅನುದಾನ ಮಂಜೂರಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ₹18 ಸಾವಿರ ಕೋಟಿ ವೆಚ್ಚದಲ್ಲಿ ಬಿಡದಿ ಬಳಿ ಸ್ಯಾಟಲೈಟ್ ಟೌನ್‌ಶಿಪ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅದನ್ನು ಬಿಟ್ಟು ಅಲ್ಪಸಂಖ್ಯಾತರ ಅನುದಾನದ ಬಗ್ಗೆ ಮಾತ್ರ ಯಾಕೆ ಮಾತನಾಡುತ್ತೀರಿ?” ಎಂದು ಪ್ರಶ್ನಿಸಿದರು.

More like this
Related

ವಿಕೆಟ್ ಪಡೆಯುವುದರಲ್ಲೇ ಗೆಲುವಿನ ಅವಕಾಶ ಇತ್ತು: ಭುವನೇಶ್ವರ್ ಕುಮಾರ್

ಅಹಮದಾಬಾದ್, : ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರನ್‌ಗಳನ್ನು ಕಾಪಾಡುವುದಕ್ಕಿಂತ ವಿಕೆಟ್‌ಗಳನ್ನು...

ವಿಕೆಟ್‌ಗಳನ್ನು ಸರಣಿಯಾಗಿ ಕಳೆದುಕೊಂಡದ್ದು ಸೋಲಿಗೆ ಕಾರಣ: ಆರ್‌ಸಿಬಿ ಬಗ್ಗೆ ದಿನೇಶ್ ಕಾರ್ತಿಕ್ ವಿಶ್ಲೇಷಣೆ

ಅಹಮದಾಬಾದ್, : ಗುಜರಾತ್ ಟೈಟನ್ಸ್ ವಿರುದ್ಧದ ಸೋಲಿನ ಬಳಿಕ ರಾಯಲ್ ಚಾಲೆಂಜರ್ಸ್...

ಹೋರ್ಮುಜ್ ಜಲಸಂಧಿ ಬಂದ್ ಪರಿಣಾಮ: ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ಇಸ್ಲಾಮಾಬಾದ್, : ಇರಾನ್-ಅಮೆರಿಕಾ ಸಂಘರ್ಷದ ನಡುವೆ ಹೋರ್ಮುಜ್ ಜಲಸಂಧಿ ಬಂದ್ ಆಗಿರುವ...

ಮೇ 3 ರಂದು ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಭೀಷ್ಮೋತ್ಸವ’

ಉಡುಪಿ: ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ 'ಭೀಷ್ಮೋತ್ಸವ' ಸಾಹಿತ್ಯ...

Copying is disabled on Udupi Digital News.