Tuesday, September 15, 2026

ಚಿಕ್ಕಮಗಳೂರು | ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಸಂಭವಿಸಿದೆ.

ನೀರು ಪಾಲಾದ ಯುವಕರನ್ನು ಅಭಿಷೇಕ್ (27) ಹಾಗೂ ಯೋಗೀಶ್ (17) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಡಗು ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಮೃತ ಅಭಿಷೇಕ್ ಅವರ ಅಕ್ಕ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

More like this
Related

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.