Monday, September 14, 2026

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು. ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿನ ಸರ್ಕಾರದಲ್ಲಿ 3 ವರ್ಷಗಳ ಕಾಲ ಡಿ.ಕೆ. ಶಿವಕುಮಾರ್​​ ಡಿಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು. ಕೆಪಿಸಿಸಿಯ ಜವಾಬ್ದಾರಿಯೂ ಅವರ ಹೆಗಲಮೇಲಿತ್ತು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

Copying is disabled on Udupi Digital News.