Monday, September 14, 2026

ಸಚಿವ ಸತೀಶ್‌ ಜಾರಕಿಹೊಳಿ ನಿವಾಸಗಳ ಮೇಲೆ ED ದಾಳಿ

ಬೆಂಗಳೂರು: ಅಬಕಾರಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಸಚಿವರು, ಅವರ ಆಪ್ತರು ಹಾಗೂ ಬೆಂಬಲಿಗರ ಮನೆಗಳು ಮತ್ತು ಕಚೇರಿಗಳನ್ನು ಗುರಿಯಾಗಿಸಿಕೊಂಡು ಏಕಕಾಲಕ್ಕೆ ಸುಮಾರು 14 ಕಡೆಗಳಲ್ಲಿ ಇ.ಡಿ. ಅಧಿಕಾರಿಗಳ ತಂಡಗಳು ಶೋಧ ನಡೆಸುತ್ತಿವೆ ಎಂದು ತಿಳಿದುಬಂದಿದೆ.

ಕಳೆದ ಜೂನ್ ನಲ್ಲಿ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ಅವರ ನಿವಾಸದ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹಣಕಾಸು ವ್ಯವಹಾರಗಳ ಸಂಪರ್ಕದ ಹಿನ್ನೆಲೆಯಲ್ಲಿ ಈ ಶೋಧ ನಡೆಸಲಾಗುತ್ತಿದೆ. ಮನೆಗಳಲ್ಲಿರುವ ಪ್ರಮುಖ ದಾಖಲೆಗಳು, ಆಸ್ತಿ ಪತ್ರಗಳು ಹಾಗೂ ಬ್ಯಾಂಕ್ ಖಾತೆಗಳ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ತನಿಖೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಹಾಗೂ ಇತರ ಸಾಕ್ಷ್ಯಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಸಚಿವರ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.