Tuesday, April 28, 2026

ಪ್ಲಾಸ್ಟಿಕ್ ಗೋಡೌನ್ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ನಂದಿನಿ ಲೇಔಟ್ ವ್ಯಾಪ್ತಿಯ ಪ್ಲಾಸ್ಟಿಕ್ ಗೋಡೌನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್ಗಳು ಕೂಡ ಹೊತ್ತಿ ಉರಿದಿವೆ

ಗೋಡೌನ್ ಪಕ್ಕದಲ್ಲೇ ಸುಮಾರು 50 ಯುವತಿಯರು ವಾಸವಿದ್ದ ಲೇಡಿಸ್ ಪಿಜಿ ಇತ್ತು. ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟ ಹೊಗೆ ಪಿಜಿಯ ಒಳಗೂ ಆವರಿಸುತ್ತಿದ್ದಂತೆ ಯುವತಿಯರು ತೀವ್ರ ಗಾಬರಿಗೊಂಡಿದ್ದಾರೆ. ಹೊರಗೆ ಬರಲು ದಾರಿಯಿಲ್ಲದೆ ಆತಂಕಗೊಂಡ ಕೆಲ ಯುವತಿಯರು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಪಿಜಿಯ ಕಾಂಪೌಂಡ್ ಗೋಡೆ ಹಾರಿ ಹೊರಬಂದಿದ್ದಾರೆ.

ಗೋಡೆ ಹಾರುವ ಮತ್ತು ಜಿಗಿಯುವ ಸಂದರ್ಭದಲ್ಲಿ ಕೆಲವು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಬೆಂಕಿಯ ಆವೇಶಕ್ಕೆ ಇಡೀ ಗೋಡೌನ್ ಸುಟ್ಟು ಕರಕಲಾಗಿದ್ದು, ಸ್ಥಳೀಯ ನಿವಾಸಿಗಳು ತಡರಾತ್ರಿ ಬೆಚ್ಚಿಬಿದ್ದಿದ್ದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನಂದಿನಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆಂಕಿ ತಗುಲಲು ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

More like this
Related

ಅಧಿಕಾರ ಬಿಟ್ಟು ಕೊಡೋಕೆ ಸಿಎಂ ‘ಸಿದ್ದ’: ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿ ಹೇಳಿಕೆ

ಯುಡಿ ನ್ಯೂಸ್ ಡಾಟ್ ಕಾಮ್ಬೆಂಗಳೂರು: ಈ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೂ...

ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ; 32 ಅಕ್ರಮ ಹೋಂಸ್ಟೇಪತ್ತೆ

ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ...

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

ಮುಂಬೈ: ಇಲ್ಲಿನ ಪೈಧೋನಿ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಫುಡ್ ಪಾಯಿಸನ್ನಿಂದ...

ಚಿನ್ನಸ್ವಾಮಿ ಸೋಲಿನ ಸೇಡು ತೀರಿಸಿಕೊಂಡ RCB: ಭುವಿ, ಹೇಜಲ್ ವುಡ್ ದಾಳಿಗೆ ಡೆಲ್ಲಿ ಧೂಳಿಪಟ!

ಯುಡಿ ನ್ಯೂಸ್ ಡಾಟ್ ಕಾಮ್ ದೆಹಲಿ:  ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 76 ರನ್​ಗಳ...

Copying is disabled on Udupi Digital News.