Wednesday, July 29, 2026

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಸಂಜೆ 4 ಗಂಟೆಗೆ ನಿಧನರಾಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್​​.ಡಿ. ರೇವಣ್ಣ, ಹೆಚ್​​.ಡಿ. ಬಾಲಕೃಷ್ಣ, ಹೆಚ್​​.ಡಿ. ರಮೇಶ್​​ ಗೌಡ, ಹೆಚ್​​.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನ ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು.

More like this
Related

ಧ್ವೇಷ ಭಾಷಣ ಪ್ರಕರಣ: ಶಾಸಕ ಯಶ್‌ಪಾಲ್‌ ಸುವರ್ಣಗೆ ಪೊಲೀಸರಿಂದ ನೋಟಿಸ್

ಉಡುಪಿ: ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಗೌರವ

ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ್ ಮಜುಂದಾರ್ ಅವರಿಂದ...

ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

ಕುಂದಾಪುರ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ...

ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ...

Copying is disabled on Udupi Digital News.