Sunday, September 13, 2026

₹5 ಲಕ್ಷ ಲಂಚ ಸ್ವೀಕರಿಸುವ ವೇಳೆ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯರಾಣಿ ಲೋಕಾಯುಕ್ತ ಬಲೆಗೆ

ಖಾತೆ ಮಾಡಿಕೊಡುವುದಕ್ಕಾಗಿ ₹10.50 ಲಕ್ಷ ಲಂಚಕ್ಕೆ ಬೇಡಿಕೆ; ಮೊದಲ ಕಂತಿನ ₹5 ಲಕ್ಷ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ದಾಳಿ – ಆಪ್ತ ಸಹಾಯಕ ಸೇರಿ ಬಂಧನ.

ಮೈಸೂರು/ಹುಣಸೂರು: ಹುಣಸೂರು ಉಪವಿಭಾಗಾಧಿಕಾರಿ (ಸಬ್‌ ಡಿವಿಷನಲ್ ಮ್ಯಾಜಿಸ್ಟ್ರೇಟ್) ಕಾವ್ಯರಾಣಿ ಅವರು ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.

ಎಚ್.ಡಿ. ಕೋಟೆ ತಾಲೂಕಿನ ಸರ್ವೇ ನಂಬರ್ 17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದಂತೆ ಡಾ. ರೂಪಾ ಅವರಿಗೆ ಖಾತೆ ಮಾಡಿಕೊಡಲು ಕಾವ್ಯರಾಣಿ ₹10 ಲಕ್ಷ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.

ಒಪ್ಪಂದದಂತೆ ಮೊದಲ ಕಂತಿನ ₹5 ಲಕ್ಷವನ್ನು ಸ್ವೀಕರಿಸಿದ ಬಳಿಕ, ಎರಡನೇ ಕಂತಿನ ಹಣ ಪಡೆಯಲು ತಮ್ಮ ನಿವಾಸಕ್ಕೆ ಬರಲು ಸೂಚಿಸಿದ್ದರು. ಈ ವೇಳೆ ಮನೆಯಲ್ಲೇ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾವ್ಯರಾಣಿಯನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕಾವ್ಯರಾಣಿ ಅವರ ಆಪ್ತ ಸಹಾಯಕ ಶಿವಕುಮಾರ್ ಅವರನ್ನು ಸಹ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ಹಾಗೂ ಮಡಿಕೇರಿ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಲೋಕಾಯುಕ್ತ ಎಸ್ಪಿ ಉದೇಶ್, ಕಾವ್ಯರಾಣಿ ಮತ್ತು ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.