Monday, April 20, 2026

ಕುವೆಂಪು ವಿವಿ ಹಗರಣ: ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

ಯುಡಿ ನ್ಯೂಸ್ ಡಾಟ್ ಕಾಮ್

ಶಿವಮೊಗ್ಗ: ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಸ್ಮಾರ್ಟ್ ಕ್ಲಾಸ್ ಕಾಮಗಾರಿಯಲ್ಲಿ ನಡೆದ ಬಹುಕೋಟಿ ಹಗರಣದ ಸಮಗ್ರ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.‌

ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ಗುರುರಾಜನ್ ಅವರನ್ನು ಒಳಗೊಂಡ ಏಕ ಸದಸ್ಯ ಸತ್ಯ ಶೋಧನಾ ಸಮಿತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ತನಿಖೆ ನಡೆಸಿ ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ವಿಶ್ವವಿದ್ಯಾಲಯದ ಎಸ್‌ಸಿ, ಎಸ್‌ಟಿ ಮತ್ತು ಇತರೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ರೂಮ್ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ (SCSP, TSP) 5 ಕೋಟಿ ರೂ. ಅನುದಾನ ಒದಗಿಸಿತ್ತು. ಅದರಲ್ಲಿ 4.25 ಕೋಟಿ ರೂ. ಗಳನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಿತ್ತು. 

ಕಾಮಗಾರಿ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ಕಳಪೆ ಕಾಮಗಾರಿ ನಡೆಸಲಾಗಿದೆ. ಕಳಪೆ ಗುಣಮಟ್ಟದ ಪರಿಕರಗಳಿಗೆ ದುಬಾರಿ ಮೊತ್ತವನ್ನು ಪಾವತಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹಲವರು ದೂರು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಸರ್ಕಾರ ನಿವೃತ್ತ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರನ್ನು ತನಿಖೆಗೆ ನೇಮಿಸಿತ್ತು. ತನಿಖೆಯಲ್ಲಿ ಆರೋಪ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ರಾಜ್ಯಪಾಲರು ಆದೇಶಿಸಿ ಏಕ ಸದಸ್ಯ ಸಮಿತಿಯನ್ನು ನೇಮಕ ಮಾಡಿದ್ದಾರೆ. 

More like this
Related

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಗೆ ಭವ್ಯ ಸ್ವಾಗತ

ಯುಡಿ ನ್ಯೂಸ್ ಡಾಟ್ ಕಾಮ್ ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ...

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಯುಡಿ ನ್ಯೂಸ್ ಡಾಟ್ ಕಾಮ್ರಾಣೆಬೆನ್ನೂರು: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು...

ಕುಂದಾಪುರ: ದಲಿತ ಹಕ್ಕುಗಳ ಸಮಿತಿಯಿಂದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ...

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ‘ಶ್ರೀ ಶಾರದಾ ಆಸರೆ ಯೋಜನೆ’ ಆರಂಭ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಮಹತ್ತರ ಯೋಜನೆ ಯುಡಿ ನ್ಯೂಸ್ ಡಾಟ್...

Copying is disabled on Udupi Digital News.