Monday, November 2, 2026

ಹಿಂದುಳಿದ–ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು; ಗೃಹ ಯೋಜನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ನಿರ್ಧಾರದಂತೆ, ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದ ಸರ್ವೆ ನಂ. 57 ಮತ್ತು 58ರಲ್ಲಿರುವ ಸರ್ಕಾರಿ ಜಮೀನುಗಳನ್ನು 22 ಮಠಗಳಿಗೆ ಮಂಜೂರು ಮಾಡಲಾಗುತ್ತದೆ. ಈ ಕ್ರಮವು ಹಿಂದುಳಿದ ಹಾಗೂ ದಲಿತ ಸಮುದಾಯಗಳ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ವಾಸಸ್ಥಳ ಒದಗಿಸುವ ಉದ್ದೇಶದಿಂದ 100 ಕೋಟಿ ರೂಪಾಯಿ ವೆಚ್ಚದ ಗೃಹ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಯೋಜನೆಯಡಿ 1200 ಚದರ ಅಡಿ ನಿವೇಶನದಲ್ಲಿ 600 ಚದರ ಅಡಿ ವಿಸ್ತೀರ್ಣದ ಮನೆಗಳನ್ನು ನಿರ್ಮಿಸುವುದಾಗಿ ಸರ್ಕಾರ ನಿರ್ಧರಿಸಿದೆ.

ಇನ್ನು, ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಸರ್ಕಾರದ ಭಾಷಣವನ್ನು ಪೂರ್ಣವಾಗಿ ಓದದೇ ಸಭೆಯಿಂದ ತೆರಳಿದ ಘಟನೆಗೆ ಸಂಪುಟ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ವಾಪಸ್ಸು ಕರೆಸಿಕೊಳ್ಳುವ ಕುರಿತು ಗಂಭೀರ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.

ಸಂಪುಟದ ಈ ನಿರ್ಧಾರಗಳು ಸಾಮಾಜಿಕ ನ್ಯಾಯ ಮತ್ತು ವಸತಿ ಭದ್ರತೆಯ ದೃಷ್ಟಿಯಿಂದ ಮಹತ್ವದ್ದೆಂದು ವಿಶ್ಲೇಷಿಸಲಾಗಿದೆ.

More like this
Related

ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ: ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಉಡುಪಿ: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ...

 ಉಡುಪಿ ಜಿಲ್ಲಾ ಆಸ್ಪತ್ರೆ ಶೀಘ್ರ ಕಾರ್ಯಾರಂಭಕ್ಕೆ ಕ್ರಮ: ಯು.ಟಿ. ಖಾದರ್

ಉಡುಪಿ: ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು,...

ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನ ಚರಿತ್ರೆ ಅನಾವರಣ 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಲೋಕಾರ್ಪಣೆ. ನವೆಂಬರ್ 2ರಂದು ಮುಂಬೈನಲ್ಲಿ...

ಎರಡು ದಿನಗಳಲ್ಲಿ ಎಎಪಿ ಮೂವರು ಶಾಸಕರ ರಾಜೀನಾಮೆ: ಪಕ್ಷ ತೊರೆದ ಕುನ್ವರ್ ವಿಜಯ್ ಪ್ರತಾಪ್ ಸಿಂಗ್

ಚಂಡೀಗಢ: ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಮತ್ತೊಂದು ರಾಜಕೀಯ...

Copying is disabled on Udupi Digital News.