ಮೈಸೂರು: ಗಾನ ಕೋಗಿಲೆ ಎಸ್. ಜಾನಕಿ ಅವರು ಇಂದು ವಹೋಸಹಜ ಕಾಯಿಲೆಯಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯೂಸಿರೆಳೆದಿದ್ದಾರೆ.
ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಜಾನಕಿ ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. ಅವರು ಆಂಧ್ರದವರಾದರೂ ಹೆಚ್ಚು ಪ್ರಸಿದ್ಧಿ ಪಡೆದು ಕನ್ನಡಿಗರ ಮನೆಮನಗಳಿಗೆ ಹತ್ತಿರವಾದದ್ದು ಕನ್ನಡ ಹಾಡುಗಳ ಮೂಲಕ. ಕನ್ನಡ ಭಾಷೆಯನ್ನು ಅತ್ಯಂತ ಸ್ಪಷ್ಟವಾಗಿ ಉಚ್ಚರಿಸುತ್ತಾ, ಇಲ್ಲಿನದ್ದೇ ಧ್ವನಿ ಎನ್ನುಹವಂತೆ ಅವರು ಸಾವಿರಾರು ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ.
48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿಗೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.




