Wednesday, September 16, 2026

ಕೆಪಿಎಸ್ ಸಿ ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, ಬಿಜೆಪಿ ಮುಖಂಡನ ಬಂಧನ!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನ ಬೆನ್ನಲ್ಲೇ, ಮಧ್ಯವರ್ತಿ, ಬಿಜೆಪಿ ಮುಖಂಡ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಿದೆ.

ಸಿಐಡಿ ಅಧಿಕಾರಿಗಳು ಬಂಧಿತ ಇಬ್ಬರು ಆರೋಪಿಗಳನ್ನು ಸೋಮವಾರ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರನ್ನು ಸೆಪ್ಟೆಂಬರ್​​ 9ರ ವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಭಾನುವಾರ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ಈ ಮಧ್ಯೆ ಭಾಲ್ಕಿ ತಾಲೂಕಿನ ಡೋಣಗಾಪುರ್ ಗ್ರಾಮದ ಹಾಗೂ ಭಾಲ್ಕಿ ನಗರದ ಲೆಕ್ಚರರ್ ಕಾಲನಿಯಲ್ಲಿರುವ ಬಸವರಾಜ್ ಕನ್ನಾಳೆ ಮನೆಗೂ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಶೋಧ ನಡೆಸಿದ್ದಾರೆ.

ಸಿಐಡಿ ತನಿಖೆ ವೇಳೆ ಸ್ಫೋಟ ವಿಚಾರ ಬಯಲಾಗಿದ್ದು, ಎಲ್ಲಾ ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರೇ ಈ ಪ್ರಶ್ನೆಪತ್ರಿಕೆ ಸೋರಿಕೆಯ ಸೂತ್ರಧಾರ ಅನ್ನೋ ವಿಚಾರ ತಿಳಿದುಬಂದಿದೆ.

ಐಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ್ದು, ಅವುಗಳನ್ನು ಮಧ್ಯವರ್ತಿ ಹಾಗೂ ಬೀದರ್ ಜಿಲ್ಲೆ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಮೂಲ ಅಭ್ಯರ್ಥಿಗಳಿಗೆ ಒಂದಕ್ಕೆ 40 ಲಕ್ಷ ರೂಪಾಯಿಯಂತೆ ಮಾರಾಟ ಮಾಡಿದ್ದರಂತೆ. ಅಷ್ಟೇ ಅಲ್ಲದೇ ಸಾಕ್ಷ್ಯ ನಾಶಪಡಿಸಲು ಓಎಂಆರ್ ಶೀಟ್ ತಿದ್ದುಪಡಿ ಹಾಗೂ ಸ್ಟ್ರಾಂಗ್ ರೂಮ್ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲು ಯತ್ನಿಸಿರೋದು ತನಿಖೆಯಲ್ಲಿ ಪತ್ತೆಯಾಗಿದೆ.

More like this
Related

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು – ರಮೇಶ್ ಕಾಂಚನ್

ಉಡುಪಿ: ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು...

ಸೆ. 18 ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ, ಕಸ್ತೂರಿ ರಂಗನ್ ವರದಿ ಕುರಿತು ಸಭೆ

ಉಡುಪಿ: ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ...

ಸೆ. 17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್...

ದ್ವಿಚಕ್ರ ವಾಹನಕ್ಕೆ ಹಾಲು ಸಾಗಾಟದ ಟ್ಯಾಂಕರ್ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

ಸ್ವಗ್ರಾಮದಲ್ಲಿ ಚೌತಿ ಹಬ್ಬ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ದುರ್ಘಟನೆ ಮಂಡ್ಯ: ದ್ವಿಚಕ್ರ...

Copying is disabled on Udupi Digital News.