Saturday, May 2, 2026

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವ್ಯಕ್ತಿ ಬಂಧನ: ಮೊಬೈಲ್‌ನಲ್ಲಿ ಮಹಿಳೆಯರ ಫೋಟೋ, ವಿಡಿಯೋ ಪತ್ತೆ

ಬೆಂಗಳೂರು, : ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯರನ್ನು ಬೆದರಿಸುತ್ತಿದ್ದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹನಿಯೂರು ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಈತ ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯನೆಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ. ಬಳಿಕ ಅದೇ ದೃಶ್ಯಗಳನ್ನು ತೋರಿಸಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಪೊಲೀಸರು ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, 20ಕ್ಕೂ ಹೆಚ್ಚು ಮಹಿಳೆಯರ ಫೋಟೋಗಳು ಹಾಗೂ ವಿಡಿಯೋಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಇನ್ನು ಕೆಲವು ಧಾರಾವಾಹಿಗಳಲ್ಲೂ ಚಂದ್ರೇಗೌಡ ನಟಿಸಿದ್ದಾನೆ. ನಕಲಿ ಗುರುತಿನ ಚೀಟಿ ಸೃಷ್ಟಿಸಿಕೊಂಡು ಹಲವರಿಗೆ ಬೆದರಿಕೆ ಹಾಕಿದ್ದಾನೆ ಎಂಬುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

More like this
Related

ಕಲಬೆರಕೆ ಸೇಂದಿ ಮಾರಾಟ ಆರೋಪ: ಇಬ್ಬರ ಬಂಧನ

ರಾಯಚೂರು: ತಾಲೂಕಿನ ಕೊರ್ತಕುಂದ ಗ್ರಾಮದಲ್ಲಿ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಆರೋಪದ...

ಪುಣೆಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ದೌರ್ಜನ್ಯ, ಹತ್ಯೆ ಆರೋಪ: 65 ವರ್ಷದ ವೃದ್ಧ ಬಂಧನ

ಪುಣೆ, ಮೇ 2: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲೂಕಿನಲ್ಲಿ ನಾಲ್ಕು...

ಜೇಮಿಸನ್ ವರ್ತನೆ ಸಹಜ ಪ್ರತಿಕ್ರಿಯೆ: ಮ್ಯಾಕ್‌ಕ್ಲೆನಘನ್

ಜೈಪುರ್, : ರಾಜಸ್ಥಾನ್ ರಾಯಲ್ಸ್ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ವಿಕೆಟ್...

Copying is disabled on Udupi Digital News.