Monday, November 16, 2026

ಓಲಾ, ಊಬರ್ ಕ್ಯಾಬ್‌ಗಳಿಗೆ ಮೀಟರ್ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ವಾಹನ ಸೀಜ್

ಬೆಂಗಳೂರು: ನಗರದಲ್ಲಿ ಓಲಾ ಮತ್ತು ಊಬರ್ ಕ್ಯಾಬ್‌ಗಳ ಸಂಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಓಲಾ, ಊಬರ್ ಕ್ಯಾಬ್‌ಗಳಲ್ಲಿ ಮೀಟರ್ ಅಳವಡಿಕೆ ಕಡ್ಡಾಯವಾಗಲಿದೆ. ಮೀಟರ್ ಅಳವಡಿಸದೆ ಸಂಚರಿಸುವ ವಾಹನಗಳನ್ನು ಜಪ್ತಿ ಮಾಡಲು ನಿಯಮ ರೂಪಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾಬ್‌ಗಳು ಆಟೋಗಳ ಮಾದರಿಯಲ್ಲಿ ಮೀಟರ್ ವ್ಯವಸ್ಥೆ ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕು. ಸಾರಿಗೆ ಇಲಾಖೆಯ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಆ್ಯಪ್ ಮೂಲಕ ಹಣ ಸಂಗ್ರಹಿಸುವ ವ್ಯವಸ್ಥೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಹಾಫ್ ಹೆಲ್ಮೆಟ್‌ಗೆ ಹೊಸ ವರ್ಷದಿಂದ ನಿಷೇಧ:
ದ್ವಿಚಕ್ರ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಹಾಫ್ ಹೆಲ್ಮೆಟ್ ಬಳಕೆಯನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಅಪಘಾತಗಳಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗುವ ಬಹುತೇಕ ಮಂದಿಗೆ ತಲೆಗೆ ಗಂಭೀರ ಗಾಯಗಳಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಫ್ ಹೆಲ್ಮೆಟ್‌ಗಳ ಬಳಕೆಗೆ ಮಾತ್ರವಲ್ಲದೆ, ಅವುಗಳ ತಯಾರಿಕಾ ಘಟಕಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಹೊಸ ವರ್ಷದಿಂದಲೇ ಈ ನಿಯಮ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ದುಬಾರಿ ದಂಡ:
ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧವೂ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಓಡಿಸಿದರೆ ದಂಡ ವಿಧಿಸುವುದರ ಜೊತೆಗೆ ವಾಹನವನ್ನು ಜಪ್ತಿ ಮಾಡುವ ನಿಯಮ ಜಾರಿಗೆ ಬರಲಿದೆ.

ಪ್ರಸ್ತುತ ಇರುವ ದಂಡದ ಮೊತ್ತವನ್ನು 1,000 ರೂ.ನಿಂದ 5,000 ರೂ.ಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಹಂತ ಹಂತವಾಗಿ ದಂಡ ವಿಧಿಸಲಾಗುತ್ತದೆ. ಈ ಸಂಬಂಧ ಕಾಯ್ದೆ ಜಾರಿಗೆ ತರಲು ಅಗತ್ಯವಿರುವ ಕಾನೂನು ಪ್ರಕ್ರಿಯೆಗಳ ಪರಿಶೀಲನೆ ಬಹುತೇಕ ಪೂರ್ಣಗೊಂಡಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಫುಟ್‌ಪಾತ್‌ನಲ್ಲಿ ವಾಹನ ಸಂಚಾರಕ್ಕೆ ಕಡಿವಾಣ ಹಾಕುವುದು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಹೆಚ್ಚಿಸುವುದು ಹಾಗೂ ಕ್ಯಾಬ್ ಸೇವೆಗಳಲ್ಲಿ ನಿಯಮ ಪಾಲನೆ ಖಚಿತಪಡಿಸುವುದು ಸರ್ಕಾರದ ಈ ಕ್ರಮಗಳ ಉದ್ದೇಶವಾಗಿದೆ ಎಂದರು.

More like this
Related

ಬಾಲ್ಯದ ಕ್ರಿಕೆಟ್ ಅಂಗಳದಿಂದ ಉರಿಯುವ ಚಿತೆಯವರೆಗೆ: ಊರ ಮಗನ ಅಗಲಿಕೆಗೆ ಮಿಡಿದ ಪತ್ರಕರ್ತನ ಅಕ್ಷರಗಳು!

ಏಕೈಕ ಪುತ್ರನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಕಂಡು ಮನಕಲಕಿದ ಪತ್ರಕರ್ತನ ಭಾವನಾತ್ಮಕ...

ಹಿಂದಿನ ಸರಕಾರಗಳು ಸ್ಥಾಪಿಸಿದ ಸಂಸ್ಥೆಗಳನ್ನು ಬಿಜೆಪಿ ಮಾರಾಟ ಮಾಡಿ ಯುವಜನರ ಉದ್ಯೋಗ ಕಸಿದುಕೊಂಡಿದೆ : ಜೆ ಪಿ ಹೆಗ್ಡೆ

ಉಡುಪಿ: ಹಿಂದಿನ ಸರಕಾರಗಳು ಸ್ಥಾಪಿಸಿದ ಸಂಸ್ಥೆಗಳು, ಉದ್ದಿಮೆಗಳನ್ನು ಮಾರಾಟ ಮಾಡಿರುವ ಬಿಜೆಪಿ...

ಎಸ್‌ಐಆರ್ ವಿವಾದ: ಸುಪ್ರೀಂ ಕೋರ್ಟ್‌ಗೆ ಇಂಡಿಯಾ ಮೈತ್ರಿಕೂಟದ ನಾಯಕರಿಂದ ಹೊಸ ಅಫಿಡವಿಟ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮುಖ್ಯ...

ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಶೀಘ್ರ ಆರಂಭಿಸಿ : ಕೆ ವಿಕಾಸ್ ಹೆಗ್ಡೆ

 ಮರಳು ಪೂರೈಕೆ ಇಲ್ಲದೆ ಸಾರ್ವಜನಿಕ ಹಾಗೂ ಸರ್ಕಾರಿ ನಿರ್ಮಾಣ ಕಾಮಗಾರಿಗಳಿಗೆ ತೊಂದರೆ ಕುಂದಾಪುರ:...

Copying is disabled on Udupi Digital News.