Sunday, May 10, 2026

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ. ಸುಧಾಕರ್  ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್  ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು.

ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

More like this
Related

ತಮಿಳುನಾಡಿನ ಹೊಸ ಸಿಎಂ ವಿಜಯ್‌ಗೆ ಶ್ರೀಲಂಕಾ ಅಧ್ಯಕ್ಷ ದಿಸಾನಾಯಕೆ ಅಭಿನಂದನೆ

ಕೊಲಂಬೊ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಹಾಗೂ ನಟ ಸಿ....

‘ಬೌಲರ್‌ಗಳು ಹೊಸ ಕೌಶಲ್ಯ ಬೆಳೆಸಿಕೊಳ್ಳಬೇಕು’: ಭಾರೀ ಸೋಲಿನ ಬಳಿಕ ರಾಜಸ್ಥಾನ್ ಬೌಲಿಂಗ್ ಕೋಚ್ ಶೇನ್ ಬಾಂಡ್

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ...

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಜಯ್‌ಗೆ ಕಮಲ್ ಹಾಸನ್ ಅಭಿನಂದನೆ

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಸಿ. ಜೋಸೆಫ್ ವಿಜಯ್...

ಸಚಿವ ಡಿ. ಸುಧಾಕರ್ ನಿಧನ ಅತ್ಯಂತ ನೋವಿನ ಕ್ಷಣ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆ ಮತ್ತು ಅಂಕಿಅಂಶ ಸಚಿವ ಡಿ. ಸುಧಾಕರ್...

Copying is disabled on Udupi Digital News.