Monday, September 14, 2026

ನೂತನ ಸಚಿವರಿಗೆ ಖಾತೆ ಹಂಚಿಕೆ : ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ಯಾರಿಗೆ ಯಾವ ಜವಾಬ್ದಾರಿ?

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ವಹಿಸಿ ರಾಜ್ಯ ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಚಿವ ಸಂಪುಟ ವಿಸ್ತರಣೆಯ ನಂತರ ಖಾತೆ ಹಂಚಿಕೆ ಕುರಿತಾಗಿ ತೀವ್ರ ಕುತೂಹಲ ಮೂಡಿದ್ದರೆ, ಇದೀಗ ಅದಕ್ಕೆ ತೆರೆ ಬಿದ್ದಿದೆ.

► ಡಿ.ಕೆ.ಶಿವಕುಮಾರ್ (ಮುಖ್ಯಮಂತ್ರಿ): ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಮಾಹಿತಿ, ಕಾನೂನು ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಕೃಷಿ ಮಾರುಕಟ್ಟೆ, ನಗರ ಮತ್ತು ಗ್ರಾಮಾಂತರ ಯೋಜನೆ, BDA ಮತ್ತು BMRDA ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಹಂಚಿಕೆಯಾಗದ ಎಲ್ಲಾ ಖಾತೆಗಳು.

► ಬಿ.ಝೆಡ್.ಝಮೀರ್ ಅಹ್ಮದ್‌ ಖಾನ್: ವಸತಿ ಇಲಾಖೆ.

► ರಾಮಲಿಂಗಾರೆಡ್ಡಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ.

► ಲಕ್ಷ್ಮಣ ಸವದಿ : ಸಹಕಾರ

► ರುದ್ರಪ್ಪ ಮಾನಪ್ಪ ಲಮಾಣಿ: ಸಕ್ಕರೆ ಮತ್ತು ಜವಳಿ.

► ಕೆ.ಎಚ್. ಮುನಿಯಪ್ಪ: ಸಮಾಜ ಕಲ್ಯಾಣ

► ಶಿವರಾಜ್ ತಂಗಡಗಿ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ.

► ಯು.ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ.

► ಟಿ. ರಘುಮೂರ್ತಿ: ಪರಿಶಿಷ್ಟ ಪಂಗಡಗಳ (ST) ಕಲ್ಯಾಣ.

► ಡಾ.ಅಜಯ್ ಸಿಂಗ್: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ.

► ಚೆಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ.

► ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ.

► ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ.

► ಶಿವಲಿಂಗೇಗೌಡ: ಅಬಕಾರಿ

► ಪುಟ್ಟರಂಗಶೆಟ್ಟಿ: ಪಶುಸಂಗೋಪನೆ ಮತ್ತು ರೇಷ್ಮೆ.

► ವಿಜಯಾನಂದ ಕಾಶಪ್ಪನವರ್: ಸಣ್ಣ ಪ್ರಮಾಣದ ಕೈಗಾರಿಕೆಗಳು, ಸಾರ್ವಜನಿಕ ಉದ್ಯಮಗಳು.

► ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ.

► ಕೆ.ಎಸ್. ಬಸವಂತಪ್ಪ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ.

► ಎಸ್.ಎಸ್. ಮಲ್ಲಿಕಾರ್ಜುನ್: ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ.

► ರಿಜ್ವಾನ್ ಅರ್ಷದ್: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು.

► ನರೇಂದ್ರ ಸ್ವಾಮಿ: ಕೃಷಿ.

► ಎಚ್.ಸಿ. ಬಾಲಕೃಷ್ಣ: ಪೌರಾಡಳಿತ.

►ಬಿ.ನಾಗೇಂದ್ರ: ಯೋಜನೆ ಮತ್ತು ಸಾಂಖ್ಯಿಕ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.