Friday, October 30, 2026

ಶಾಲೆ, ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ: ಆರೋಗ್ಯ ಸಚಿವ ಯು.ಟಿ. ಖಾದರ್ ಘೋಷಣೆ

ಬೆಂಗಳೂರು: ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಆರೋಗ್ಯ ರಕ್ಷಣೆಗಾಗಿ ಈ ಕ್ರಮ ಜಾರಿಗೊಳಿಸಲಾಗಿದ್ದು, ಹೈ ಫ್ಯಾಟ್, ಹೈ ಶುಗರ್ ಹಾಗೂ ಹೈ ಸಾಲ್ಟ್ (HFSS) ಅಂಶಗಳನ್ನು ಹೊಂದಿರುವ ಆಹಾರ ಉತ್ಪನ್ನಗಳ ಮಾರಾಟಕ್ಕೆ ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಅವಕಾಶ ಇರುವುದಿಲ್ಲ ಎಂದು ಹೇಳಿದರು.

ರಾಜ್ಯದ 134 ಶಾಲೆಗಳಲ್ಲಿ ನಡೆಸಿದ ಸಮೀಕ್ಷೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಯಮವು ಶಾಲೆಗಳ ಕ್ಯಾಂಟೀನ್‌ಗಳಿಗೂ ಅನ್ವಯವಾಗಲಿದ್ದು, ವಿದ್ಯಾರ್ಥಿಗಳಿಗೆ ಜಂಕ್ ಫುಡ್ ನೀಡುವುದನ್ನು ಕಟ್ಟುನಿಟ್ಟಾಗಿ ತಡೆಯಲಾಗುವುದು ಎಂದು ಸಚಿವರು ತಿಳಿಸಿದರು.

ನಿಯಮ ಉಲ್ಲಂಘಿಸಿ ಜಂಕ್ ಫುಡ್ ಮಾರಾಟ ಮಾಡಿದ ಅಂಗಡಿಗಳ ವಿರುದ್ಧ ಭಾರೀ ದಂಡ ವಿಧಿಸುವುದರ ಜೊತೆಗೆ, ಅಗತ್ಯವಿದ್ದರೆ ಪರವಾನಗಿಯನ್ನೂ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

“ರೋಗ ಬಂದ ನಂತರ ಚಿಕಿತ್ಸೆ ನೀಡುವುದಕ್ಕಿಂತ ಮೊದಲು ಅದನ್ನು ತಡೆಗಟ್ಟುವುದು ಮುಖ್ಯ. ನಮ್ಮ ಆರೋಗ್ಯ ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಕ್ಕಳಲ್ಲಿ ಉತ್ತಮ ಆಹಾರ ಪದ್ಧತಿಯನ್ನು ಬೆಳೆಸುವುದು ಅಗತ್ಯ,” ಎಂದು ಯು.ಟಿ. ಖಾದರ್ ಹೇಳಿದರು.

ಶಾಲೆಗಳ ಕ್ಯಾಂಟೀನ್‌ಗಳಲ್ಲಿಯೇ ಜಂಕ್ ಫುಡ್ ನೀಡುತ್ತಿರುವುದು ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದ್ದು, ಪಿಯುಸಿ ಹಂತದವರೆಗಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ 50 ಮೀಟರ್ ವ್ಯಾಪ್ತಿಯಲ್ಲಿ ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

More like this
Related

ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಹಡಗಿಗೆ ಬೆಂಕಿ

ಟೆಹರಾನ್: ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು...

ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಳ ಮಾಡಲು...

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್...

Copying is disabled on Udupi Digital News.