Sunday, September 13, 2026

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

ಯುಡಿ ನ್ಯೂಸ್ ಡಾಟ್ ಕಾಮ್

ರಾಯಚೂರು: ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) ಅವರು ಹೃದಯಾಘಾತದಿಂದ ಅಸ್ತಂಗತರಾಗಿದ್ದಾರೆ.

ಮಂಗಳವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು.

ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ಸಿದ್ದರಾಮನಂದ ಸ್ವಾಮೀಜಿ ಸಕ್ರಿಯರಾಗಿದ್ದರು. ಜನವರಿ 12, 13 ಮತ್ತು 14ರಂದು ನಡೆದ ಹಾಲುಮತ ಉತ್ಸವ ಕಾರ್ಯಕ್ರಮಗಳನ್ನು ಅವರು ಸ್ವತಃ ನಡೆಸಿಕೊಟ್ಟಿದ್ದರು.

ಕಳೆದ 2023 ಮತ್ತು 2024ರಲ್ಲಿ ಇದೇ ಮಠದ ಉತ್ಸವಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ಗಣ್ಯರೊಂದಿಗೆ ಗುರುಪೀಠದ ಆತ್ಮೀಯ ಸಂಪರ್ಕ ಇತ್ತು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.