Tuesday, September 15, 2026

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಮಹತ್ವದ ಚರ್ಚೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಮೂಲಗಳ ಪ್ರಕಾರ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಭೆಯಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿ, ಸಿದ್ದರಾಮಯ್ಯ ಅವರಿಗೆ ಪರ್ಯಾಯ ರಾಜಕೀಯ ಜವಾಬ್ದಾರಿಗಳ ಕುರಿತೂ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ನಾಯಕರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೇ 27ರಂದು ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೇಮಕಾತಿ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆದರೆ ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

More like this
Related

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.