Monday, May 4, 2026

ಶೃಂಗೇರಿ : ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಕಾಂಗ್ರೆಸ್ ನ ಟಿ ಡಿ ರಾಜೇಗೌಡ, ಬಿಜೆಪಿಯ ಜೀವರಾಜ್ ಗೆ ಮುಖಭಂಗ

ಚಿಕ್ಕಮಗಳೂರು: ಅತ್ಯಂತ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ   2023ರ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.

ಉಚ್ಛ ನ್ಯಾಯಾಲಯದ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ (ಮೇ.02) ನಡೆದಿದ್ದು, ಟಿ.ಡಿ.ರಾಜೇಗೌಡ ಪ್ರತಿಸ್ಪರ್ಧಿ ಡಿ.ಎನ್.ಜೀವರಾಜ್ ವಿರುದ್ಧ ಜಯಗಳಿಸುವ ಮೂಲಕ ಶಾಸಕ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಅಂಚೆ ಮತಗಳ ಮರು ಎಣಿಕೆ
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಉಚ್ಚನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.

ಮೊಕದ್ದಮೆಯನ್ನು ಕೈಗೆತ್ತಿಕೊಂಡು ಉಚ್ಚ ನ್ಯಾಯಾಲಯ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಅದರಂತೆ ಶನಿವಾರ ನಗರದ ಐಡಿಎಸ್ ಜಿ ಕಾಲೇಜಿನಲ್ಲಿ 2023ರ ವಿಧಾನಸಭೆ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಕೈಗೊಂಡಿತ್ತು. ಶನಿವಾರ ಬೆಳಿಗ್ಗೆಯಿಂದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಸಿದ್ದು, ಅಂಚೆ ಮತಗಳ ಮರು ಎಣಿಕೆಯಲ್ಲಿ ಟಿ.ಡಿ.ರಾಜೇಗೌಡ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

ಇಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಟಿ.ಡಿ.ರಾಜೇಗೌಡ ಈ ಹಿಂದಿಗಿಂತಲೂ ಹೆಚ್ಚುವರಿಯಾಗಿ ಎರಡು ಮತಗಳನ್ನು ಪಡೆದುಕೊಳ್ಳುವ ಮೂಲಕ ಲೀಡನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ
ಮರು ಮತ ಎಣಿಕೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ್ದ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸತ್ಯಕ್ಕೆ ಜಯ ಸಿಕ್ಕಿದೆ. ಜನಾದೇಶ ಬದಲಿಸಲು ಸಾಧ್ಯವಿಲ್ಲ ಎಂಬ ಘೋಷಣೆಗಳನ್ನು ಕೂಗಿದರು.

2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಒಟ್ಟು 1822 ಅಂಚೆ ಮತಗಳು ಚಲಾವಣೆಯಾಗಿದ್ದವು. ಅದರಲ್ಲಿ 279 ಮತಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಈ ತಿರಸ್ಕೃತ ಮತಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಮರು ಎಣಿಕೆಗೆ ಒತ್ತಾಯಿಸಿ ಉಚ್ಚನ್ಯಾಯಾಲಯದ ಮೊರೆ ಹೋಗಿದ್ದರು. ಸುಧೀರ್ಘ ಕಾನೂನು ಹೋರಾಟದ ನಂತರ ಉಚ್ಚ ನ್ಯಾಯಾಲಯ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು.

More like this
Related

ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

ಬಾಗಲಕೋಟೆ : ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ಕಣವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ...

ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚಿಸುತ್ತೇವೆ: ವಿಜಯ್ ನೇತೃತ್ವದ ಟಿವಿಕೆ ವಿಶ್ವಾಸ

ಚೆನ್ನೈ: ತಮಿಳುನಾಡಿನಲ್ಲಿ ಸೂಪರ್ ಸ್ಟಾರ್‌ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ...

ಪಂಚ ರಾಜ್ಯ ಚುನಾವಣಾ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ರ‍್ಯಾಲಿ ನಿಷೇಧಿಸಿದ ಚುನಾವಣಾ ಆಯೋಗ

ಕೋಲ್ಕತ್ತಾ: ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ....

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ ಬಿಜೆಪಿ ಮುನ್ನಡೆ

Kerala Election Results 2026: ಬಹುಮತದ ಗಡಿ ದಾಟಿದ ಯುಡಿಎಫ್ ಮೈತ್ರಿಕೂಟಕೇರಳ...

Copying is disabled on Udupi Digital News.