Thursday, October 29, 2026

ಎಸ್‌.ಎಸ್‌.ಎಲ್‌.ಸಿ , ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪರೀಕ್ಷೆಗಳ ಫಲಿತಾಂಶ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್‌ 7 ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಫಲಿತಾಂಶ ಏಪ್ರಿಲ್‌ 24 ಕ್ಕೆ ಹೊರಬೀಳಲಿದೆ.ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

SSLC ಪರೀಕ್ಷಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871.

ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

More like this
Related

ನ. 1ರಂದು ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯ ಉದ್ಘಾಟನೆ

ಉಡುಪಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಇದರ ನವೀಕೃತ...

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ವರ್ಗಾವಣೆ, ಮಹೇಶ್ ಪಿ.ಎಸ್.  ಹೊಸ ಎಸಿ

ಕುಂದಾಪುರ: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ...

ಪರಿಶಿಷ್ಟ ಜಾತಿಯ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಿ: ಮಂಜುನಾಥ್ ಚೇರ್ಕಾಡಿ ಮನವಿ

ಉಡುಪಿ: ಉಡುಪಿ ಜಿಲ್ಲೆಯ ಏಳು ತಾಲೂಕು ಪಂಚಾಯತ್‌ಗಳು ಹಾಗೂ ಚೇರ್ಕಾಡಿ ಗ್ರಾಮ...

ಪರಿಶಿಷ್ಟ ಪಂಗಡದ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಸಿಗಬೇಕು: ಕೆ.ಟಿ. ನಾಯ್ಕ್

ಉಮೇಶ್ ನಾಯ್ಕ್ ಅವರ ಮನವಿ ನ್ಯಾಯಸಮ್ಮತ; ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ...

Copying is disabled on Udupi Digital News.