Wednesday, June 17, 2026

ಶಿವಮೊಗ್ಗದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಹತ್ಯೆ: ಸಹಪಾಠಿಗಳ ಜಗಳ ಬಿಡಿಸಲು ಹೋಗಿ ಹೆಣವಾದ ಬಾಲಕ

ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಮೇಲೆ ಅನ್ಯ ಕೋಮಿನ ಬಾಲಕರು ಮಾರಣಾಂತಿಕ ಹಲ್ಲೆ ನಡೆಸಿ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ನಿನ್ನೆ ಸಂಜೆ ಈ ಭೀಕರ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

ಮೃತ ಬಾಲಕನನ್ನು ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಕೇತ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಕೆಲ ವಿದ್ಯಾರ್ಥಿಗಳ ನಡುವೆ ಜಗಳ ನಡೆಯುತ್ತಿತ್ತು. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಾಗ ಅದನ್ನು ಬಿಡಿಸಲೆಂದು ಸಂಕೇತ್ ಮಧ್ಯಪ್ರವೇಶಿಸಿದ್ದಾನೆ. ಆದರೆ, ಇದೇ ವೇಳೆ ನಾಲ್ವರು ವಿದ್ಯಾರ್ಥಿಗಳು ಅವನ ಮೇಲೆ ಹಲ್ಲೆ ನಡೆಸಿದರೆಂದು ತಿಳಿದುಬಂದಿದೆ.

ಹಲ್ಲೆಯ ವೇಳೆ ಎದೆಯ ಭಾಗಕ್ಕೆ ಬಲವಾದ ಹೊಡೆತ ಬಿದ್ದ ಪರಿಣಾಮ ಸಂಕೇತ್ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಘಟನೆ ಸಂಬಂಧಿಸಿ ತುಂಗನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ. ಮೃತ ಸಂಕೇತ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

More like this
Related

ಸುಕೇಶ್ ಚಂದ್ರಶೇಖರ್ ಪತ್ನಿ ಲೀನಾ ಮಾರಿಯಾ ಪಾಲ್ ಜಾಮೀನು ಅರ್ಜಿಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ರೂ.200 ಕೋಟಿ ವಂಚನೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ...

ಗ್ರೈಂಡರ್‌ನಿಂದ ವಿದ್ಯುತ್ ಶಾಕ್: ಚಾಮರಾಜನಗರದಲ್ಲಿ ನಾಲ್ಕು ವರ್ಷದ ಬಾಲಕಿ ದುರ್ಮರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕಳ್ಳಿಗೌಡನಹಳ್ಳಿ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿ ಮನೆಯ...

ಕೋಟ : ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಐರೋಡಿಯ ಯುತಿಗೆ 10.83 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಕೋಟ : ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಲಕ್ಷಾಂತರ ರೂ....

Copying is disabled on Udupi Digital News.