ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡನೆ ಶುರು ಮಾಡಿದ್ದಾರೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ
ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ. ನಮ್ಮ ರಾಜ್ಯವು ಭಾರತದ ಐಟಿ ರಫ್ತುಗಳಲ್ಲಿ ಶೇ.43ರಷ್ಟು ಕೊಡುಗೆಯನ್ನು ನೀಡಿದೆ. ಹೊಸ ಐಟಿ ನೀತಿ 2025–30 ಅಡಿಯಲ್ಲಿ 2030ರ ವೇಳೆಗೆ ಸಾಫ್ಟ್ವೇರ್ ರಫ್ತು 11.5 ಲಕ್ಷ ಕೋಟಿ ರೂ. ತಲುಪುವ ನಿರೀಕ್ಷೆಯಿದೆ.
ಕರ್ನಾಟಕ ರಾಜ್ಯವು 18 ಸಾವಿರಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ಅಪ್ಗಳ ಕೇಂದ್ರವಾಗಿದ್ದು, ಜಾಗತಿಕ ಸ್ಟಾರ್ಟ್ಅಪ್ ಪರಿಸರಗಳಲ್ಲಿ ಕಳೆದ ವರ್ಷದ 21ನೇ ಸ್ಥಾನದಿಂದ 14ನೇ ಸ್ಥಾನಕ್ಕೇರಿದೆ.
ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ ಕಾರ್ಯಕ್ರಮವು (LEAP) ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿ ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು 1,000 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ.
ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್
ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು
ಕಾಲೇಜುಗಳಲ್ಲಿ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ
ಕಾಲೇಜುಗಳಲ್ಲಿ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ ಜಾರಿ ಮಾಡಲಾಗುತ್ತದೆ. ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧಾರ ಮಾಡಲಾಗಿದೆ. ಧಾರವಾಡ, ಬೆಂಗಳೂರಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೆ ಅಧ್ಯಯನ ಕೇಂದ್ರ ನಿರ್ಮಿಸಲಾಗುವುದು.
ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ
ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗುವುದು, ವಾಯುಯಾನ ಹಾಗೂ ಜಲಸಾಹಸ ಯೋಜನೆ ಅನುಷ್ಠಾನಗೊಳಿಸಲಾಗುವುದು. ಸೀ ಪ್ಲೇನ್, ಹೆಲಿಟ್ಯಾಕ್ಸಿ, ಜಾಯ್ ರೈಡ್, ರಿವರ್ ಕ್ರೂಸ್ಗೆ ಪ್ರೋತ್ಸಾಹ ನೀಡಲಾಗುತ್ತದೆ. ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ, ಪೊಲೀಸರಿಗೆ ಕೌಶಲ್ಯ ತರಬೇತಿ ನೀಡಲಾಗುವುದು. ಗದಗ-ಕಪ್ಪತ್ತಗುಂಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿಗೊಳಿಸಲಾಗುವುದು, ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿ ಕೈಮರದವರೆಗೆ ರೋಪ್ ವೇ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿಗೆ ನಿರ್ಧಾರ
ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು.18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ತದಡಿ ಪ್ರದೇಶದಲ್ಲಿ ಪರಿಸರಸ್ನೇಹಿ ವಸತಿ ವ್ಯವಸ್ಥೆ
ಉತ್ತರ ಕನ್ನಡ ಜಿಲ್ಲೆ ತದಡಿ ಪ್ರದೇಶದಲ್ಲಿ ಪರಿಸರಸ್ನೇಹಿ ವಸತಿ ವ್ಯವಸ್ಥೆ ಮಾಡಲಾಗುವುದು, ಪ್ರವಾಸಿ ಮಾಹಿತಿ ಕೇಂದ್ರಗಳು, ಪರಿಸರ ಸ್ನೇಹಿ ವಾಕಿಂಗ್ ಕಾರಿಡಾರ್ ನಿರ್ಮಿಸಲಾಗುವುದು, ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು. ಈ ಪೈಕಿ 7 ರೈಲು ಮಾರ್ಗಗಳಿಗೆ ಭೂಸ್ವಾಧೀನಕ್ಕಾಗಿ 2,950 ಕೋಟಿ ರೂ. ಮೀಸಲಿಡಲಾಗಿದೆ. ನಿರ್ಮಾಣ ಕಾಮಗಾರಿಗಾಗಿ 2,682 ಕೋಟಿ ರೂ. ವೆಚ್ಚ ಮಾಡಲಾಗಿದೆ. 2026-27ನೇ ಆಯವ್ಯಯದಲ್ಲಿ 600 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧಾರ
ರಾಜ್ಯ ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧಾರ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್ಪೋರ್ಟ್ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಸಿದ್ದರಾಮಯ್ಯ
ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ, ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ಅನುದಾನ
ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.
ತಾಯಂದಿರ ಮರಣ ಪ್ರಮಾಣ ಇಳಿಕೆ
ಕಳೆದ ವರ್ಷ ಪ್ರಾರಂಭಿಸಲಾದ, ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಪರಿಣಾಮವಾಗಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು ಶೇ.24ರಷ್ಟು ಇಳಿಕೆಯಾಗಿರುತ್ತದೆ. ಈ ಅಭಿಯಾನದಡಿ ಪ್ರತಿ ತಾಯಂದಿರ ಮರಣವನ್ನು ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಸೇವೆಗಳನ್ನು ನೀಡಲಾಗುತ್ತಿದೆ. ಹೆರಿಗೆ ಆಸ್ಪತ್ರೆಗಳಿಗೆ ಮಾರ್ಗದರ್ಶನ, ಹೆಚ್ಚಿನ ಮಾನವ ಸಂಪನ್ಮೂಲ ಮತ್ತು ಆಧುನಿಕ ಉಪಕರಣಗಳನ್ನು ನೀಡಲಾಗುತ್ತಿದೆ.
ಕಲ್ಯಾಣ ಕರ್ನಾಟಕದಲ್ಲಿ ಕಾಲೇಜುಗಳ ಅಭಿವೃದ್ಧಿ
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡ ಪುನರ್ ನಿರ್ಮಾಣ
ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಣ
2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.
ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ
ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತದೆ, ಪ್ರಸಕ್ತ ಸಾಲಿನಲ್ಲಿ 15 ಸಾವಿರ ಭೋದಕ ಹುದ್ದೆಗಳ ನೇಮಕಾತಿ ಮಾಡಲಾಗುವುದು, 800 ಶಾಲೆಗಳು ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಕ್ಕೆ ನಿರ್ಧರಿಸಲಾಗುತ್ತದೆ. 800 ಶಾಲೆಗಳ ಉನ್ನತೀಕರಣಕ್ಕೆ 3900 ಕೋಟಿ ರೂ. ಅನುದಾನ ನೀಡಲಾಗುವುದು.ಪ್ರಾಥಮಿ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ನೀಡಲಾಗುತ್ತದೆ.
1ರಿಂದ 10ನೇ ತರಗತಿಯವರೆಗೆ ಉಚಿತ ಪಠ್ಯ ಪುಸ್ತಕಗಳ ವಿತರಣೆ ಮಾಡಲಾಗುತ್ತದೆ.565 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ದುರಸ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಮೀಸಲು, ಶಾಲಾ-ಕಾಲೇಜು ನಿರ್ವಹಣೆಗಾಗಿ 125 ಕೋಟಿ ರೂ. ಅನುದಾನ ನೀಡಲಾಗುವುದು, ಶಿಕ್ಷಕರ ಇಂಗ್ಲಿಷ್ ಭಾಷಾ ತರಬೇತಿ 24 ಕೋಟಿ ರೂ. ಅನುದಾನ, 8ರಿಂದ 12ನೇ ತರಗತಿಗೆ AI ಆಧಾರಿತ ಕಲಿಕಾ ಸೌಲಭ್ಯ, ವಿದ್ಯಾರ್ಥಿಗಳ ಒತ್ತಡ ನಿವಾರಣೆಗೆ ಆರೋಗ್ಯ ಸಲಹೆಗಾರರ ನೇಮಕ ಮಾಡಲಾಗುವುದು.
ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ
ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ. 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.ಸುರಂಗ ಮಾರ್ಗ ಹಾಗೂ ಮೇಲ್ಸೇತುವೆ ರಸ್ತೆಗೆ 2,250 ಕೋಟಿ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜಿಎಸ್ಸಿಟಿ ಸಂಗ್ರಹಣೆಯಲ್ಲಿ ಕುಸಿತದಿಂದ ಹಣಕಾಸು ಒತ್ತಡ
ಜಿ.ಎಸ್.ಟಿ ಸಂಗ್ರಹಣೆಯಲ್ಲಿನ ಕುಸಿತದಿಂದ ರಾಜ್ಯಗಳಲ್ಲಿ ಹೆಚ್ಚಿನ ಹಣಕಾಸು ಒತ್ತಡ ಉಂಟಾಗಿದೆ. ತೆರಿಗೆ ರಚನೆಯಲ್ಲಿನ ಬದಲಾವಣೆ ಮತ್ತು ಜಿ.ಎಸ್.ಟಿ ದರ ತರ್ಕಬದ್ಧಗೊಳಿಸುವಿಕೆಯು ಕೇಂದ್ರ ಸರ್ಕಾರಕ್ಕಿಂತ ಹೆಚ್ಚಾಗಿ ರಾಜ್ಯಗಳ ರಾಜಸ್ವ ಸಂಗ್ರಹಣೆಯ ಮೇಲೆ ನೇರವಾಗಿ ಪ್ರಭಾವ ಬೀರಿದೆ. ರಾಜ್ಯಗಳು ರಾಜಸ್ವ ನಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಮಾದಕ ವಸ್ತುಗಳು ಮತ್ತು ಐಶಾರಾಮಿ ವಸ್ತುಗಳ ಮೇಲೆ ಸೆಸ್ ಮತ್ತು ಇತರೆ ತೆರಿಗೆಗಳನ್ನು ವಿಧಿಸುವ ಮೂಲಕ ಕೇಂದ್ರ ಸರ್ಕಾರವು ರಾಜಸ್ವವನ್ನು ಸಂಗ್ರಹಿಸುತ್ತಿದ್ದು, ಈ ಆದಾಯದ ಸಂಪೂರ್ಣ ಮೊತ್ತವು ಕೇಂದ್ರ ಸರ್ಕಾರದ ಬೊಕ್ಕಸವನ್ನು ಸೇರಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜೈವಿಕ ತಂತ್ರಜ್ಞಾನ, ಸ್ಟಾರ್ಟ್ಅಪ್, ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಕ್ಷೇತ್ರಗಳಲ್ಲಿ ಹೂಡಿಕೆ: ಸಿದ್ದರಾಮಯ್ಯ
ಕರ್ನಾಟಕದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಸ್ಟಾರ್ಟ್ಅಪ್, ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಕ್ಷೇತ್ರಗಳಲ್ಲಿನ ಸಾಧನೆಗಳು ಜಾಗತಿಕ ಹೂಡಿಕೆ ಮತ್ತು ಪ್ರತಿಭೆಗಳನ್ನು ಸೆಳೆಯುತ್ತಿವೆ. ಬಿಯಾಂಡ್ ಬೆಂಗಳೂರು ಪರಿಕಲ್ಪನೆಯು ಹೆಚ್ಚಿನ ಬಂಡವಾಳವನ್ನು ಆಕರ್ಷಿಸುತ್ತಿದೆ. ರಾಜ್ಯವು ರೂಪಿಸಿರುವ ಹೊಸ ಕೈಗಾರಿಕಾ ನೀತಿಯಿಂದ ಹಂತ-2 ಮತ್ತು ಹಂತ-3 ನಗರಗಳಲ್ಲಿಯೂ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮನೆ ಇಲ್ಲದವರಿಗೆ ಮನೆ, ಕೆಲಸ ಇಲ್ಲದವರಿಗೆ ಕೆಲಸ
ವಸತಿರಹಿತರಿಗೆ ಮನೆಗಳು, ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ತಲ್ಲಣಗಳನ್ನು ನಿಭಾಯಿಸಲು ಸೂಕ್ತ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ಒತ್ತು: ಸಿದ್ದರಾಮಯ್ಯ
ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಯಲ್ಲಿ ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಇಲಾಖಾವಾರು ನೀಡುವ ಅನುದಾನಗಳನ್ನು ಹೊರತುಪಡಿಸಿ ಕಳೆದ ವರ್ಷ ರಸ್ತೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ವನ್ನು ಜಾರಿಗೊಳಿಸಿ 8,600 ಕೋಟಿ ರೂ. ಗಳ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದರ 2ನೇ ಹಂತವಾಗಿ 2026-27ನೇ ಸಾಲಿನಲ್ಲಿ 4,000 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ವಿವಿಧ ಇಲಾಖೆಗಳಿಗೆ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನವೆಷ್ಟು?
ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.
ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ
ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ
ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.
ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.
ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ
ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ
ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ
ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ
ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ
ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.
ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿ ಸಿಎಂ ಘೋಷಣೆ
ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮುನಿರಾಬಾದ್-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆL ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮಲೆನಾಡು, ಕರಾವಳಿಯಲ್ಲಿ ಕಾಲು ಸಂಕ ನಿರ್ಮಾಣ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಹಾಗೂ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.
ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ: ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ ಎಐ ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಆರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ : ಸಿದ್ದರಾಮಯ್ಯ: ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ ಮಾಡಲಾಗುತ್ತದೆ, ಬೆಳಗಾವಿ, ಕಲಬುರಗಿಯಲ್ಲಿ ಕುರಿ ಸಾಕಾಣಿಕೆಗೆ ಪೋತ್ಸಾಹ ನೀಲಡಾಗುತ್ತದೆ. ಹಸು, ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ರೂ. ಮೀಸಲಿಡಲಾಗುವುದು, 20 ತಾಲೂಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.10 ಕೋಟಿ ರೂ. ವೆಚ್ಚದಲ್ಲಿ 15 ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರಿನಲ್ಲಿ ಬೊಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪಿಸಲಾಗುವುದು. ಬಂಡೂರು ಕುರಿ ಸಂವರ್ಧನಾ ಕೇಂದ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಆರೋಗ್ಯ ಕ್ಷೇತ್ರಕ್ಕೆ ಕರ್ನಾಟಕ ಬಜೆಟ್ನಲ್ಲಿ ಸಿಕ್ಕಿದ್ದೇನು?: ಆರೋಗ್ಯ ಇಲಾಖೆ ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ರೂ. ಮೀಸಲಿಡಲಾಗುವುದು, ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೆಂಟರ್ ತೆರೆಯಲಾಗುವುದು. ಐಸಿಯುಗಳಿಗೆ ಉಪಕರಣ ಮೇಲ್ದರ್ಜೆಗೇರಿಸಲು 45 ಕೋಟಿ ರೂಪಾಯಿ ಮೀಸಲಿಡಲಾಗುವುದು. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಪೌಷ್ಟಿಕ ಪುನಶ್ಚೇತನ ಕೇಂದ್ರ ತೆರೆಯಲಾಗುವುದು. 18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್ ನೀಡಲಾಗುವುದು. ಮಾರಣಾಂತಿಕ ಕಾಯಿಲೆ ರೋಗಿಗಳಿಗೆ ಕೇರಳ ಮಾದರಿ ಗೃಹಾಧಾರಿತ ಆರೈಕೆ ಒದಗಿಸಲಾಗುವುದು. ಇಸ್ಕಾನ್ ಮೂಲಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರ ಪೂರೈಕೆ ಮಾಡಲಾಗುವುದು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಶೀಘ್ರ ಭರ್ತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣ: ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ 2026ರ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ: ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲು: ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ: 60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ: ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.
56,432 ಉದ್ಯೋಗ ಭರ್ತಿ: ಸಿದ್ದರಾಮಯ್ಯ: ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ.ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ.
ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ: ಸಿದ್ದರಾಮಯ್ಯ: ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ: ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಹಾಲು ಕೊಡುವ ಹಸುಗಳ ಆರೈಕೆ ಬಗ್ಗೆ ಸಿದ್ದರಾಮಯ್ಯ ಮಾತು: ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.




