Monday, September 14, 2026

ತೀರ್ಥಹಳ್ಳಿ: ಭಾರೀ ಮಳೆಗೆ ಗುಡ್ಡ ಕುಸಿತ; ಒಂದೇ ಕುಟುಂಬದ ಮೂವರು ಮೃತ್ಯು

ಶಿವಮೊಗ್ಗ: ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರ ಬೆಳಗಿನ ಜಾವ 2:30ರ ವೇಳೆ ನಡೆದಿದೆ.

ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ (35), ನಾಗವೇಣಿ (28), ಸಂತೋಷ (3) ಎಂದು ಗುರುತಿಸಲಾಗಿದೆ.

ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೂವರ ಮೃತದೇಹಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಪಕ್ಕದ ಶೆಡ್‌ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.