Saturday, November 14, 2026

ಬೆಂಗಳೂರಿನಲ್ಲಿ ದುರಂತ: ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು 9 ವರ್ಷದ ಬಾಲಕ ಸಾವು

ಬೆಂಗಳೂರು: ನಗರದ ಶ್ರೀರಾಮಪುರದಲ್ಲಿ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 9 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಸುಬ್ರಮಣಿ (9) ಎಂದು ಗುರುತಿಸಲಾಗಿದೆ. ನವೆಂಬರ್ 2ರಂದು ಈ ದುರ್ಘಟನೆ ಸಂಭವಿಸಿತ್ತು. ಬಾಲಕ ವಾಸವಿದ್ದ ಮನೆಯ ಸಮೀಪದಲ್ಲೇ ಕೆಮಿಕಲ್ ಫ್ಯಾಕ್ಟರಿ ಇದ್ದು, ಆಟವಾಡುತ್ತಾ ಫ್ಯಾಕ್ಟರಿ ಆವರಣಕ್ಕೆ ತೆರಳಿದ್ದ ವೇಳೆ ಈ ಅವಘಡ ನಡೆದಿದೆ.

ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಾಲಕ ಬಿದ್ದಿದ್ದಾನೆ. ತಕ್ಷಣವೇ ಅಲ್ಲಿದ್ದವರು ಮಗುವನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ವೈದ್ಯರು ಸತತ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಇಂದು ಬಾಲಕ ಕೊನೆಯುಸಿರೆಳೆದಿದ್ದಾನೆ.

ಘಟನೆಯ ಸಂಪೂರ್ಣ ದೃಶ್ಯಾವಳಿ ಫ್ಯಾಕ್ಟರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಾಲಕನ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

More like this
Related

ಉಡುಪಿಯಲ್ಲಿ ಡಿ.28ರಿಂದ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ

₹2.85 ಕೋಟಿ ವೆಚ್ಚದಲ್ಲಿ ಅದ್ಧೂರಿ ಆಚರಣೆ; ಒಂದು ಲಕ್ಷಕ್ಕೂ ಅಧಿಕ ಭಕ್ತರ...

ನ.20ರಂದು ಮಂಗಳೂರಿನಲ್ಲಿ 73ನೇ ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾರೋಪ

ಮಂಗಳೂರು : ನ. 14 ರಿಂದ 20ರವರೆಗೆ ರಾಜ್ಯಾದ್ಯಂತ ಆಚರಿಸಲಾಗುತ್ತಿರುವ 73ನೇ...

ನ.15-17: ದಕ ಮತ್ತು ಉಡುಪಿ ಜಿಲ್ಲೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರ ಸ್ವಾಮಿ ಪ್ರವಾಸ

ಉಡುಪಿ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ...

Copying is disabled on Udupi Digital News.