Thursday, May 7, 2026

ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಈ ಗೆಲುವು, ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಿಕ್ಕ ಗೆಲುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಸತತ ಪರಿಶ್ರಮ ಮತ್ತು ದಣಿವರಿಯದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆ ನಂತರ ಫಲಿತಾಂಶ ಘೋಷಿಸಲಾಗಿದೆ. ಸಂವಿಧಾನಾತ್ಮಕ ಹೋರಾಟದ ಮೂಲಕ ಮತದಾರರ ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಜೀವರಾಜ್ ಅವರಿಗೆ ಹೃತ್ಪೂರ್ವಕ, ಹೆಮ್ಮೆಯ ಅಭಿನಂದನೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಯಾವತ್ತೂ ಸೋಲುವುದಿಲ್ಲ ಎನ್ನುವುದಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಪ್ರಕರಣ ಸಾಕ್ಷಿಯಾಗಿದೆ. ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೂ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ತಿಳಿಸಿದ್ದಾರೆ.

More like this
Related

200ನೇ ಐಪಿಎಲ್ ಪಂದ್ಯಕ್ಕೂ ಮುನ್ನ ಭುವನೇಶ್ವರ್ ಕುಮಾರ್‌ಗೆ ಕೊಹ್ಲಿ ಪ್ರಶಂಸೆ

ಲಖನೌ : ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಇತಿಹಾಸದಲ್ಲಿ ಭುವನೇಶ್ವರ್ ಕುಮಾರ್...

ಆಪರೇಷನ್ ಸಿಂಧೂರ್‌ ಭಾರತದ ಸಂಕಲ್ಪದ ಪ್ರತೀಕ: ಕೇಂದ್ರ ಸಚಿವರ ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಒಂದು ವರ್ಷದ ಹಿಂದೆ ನಡೆದ ‘ಆಪರೇಷನ್ ಸಿಂಧೂರ್‌’ ಭಾರತವು ಭಯೋತ್ಪಾದನೆ...

ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ವಜಾ ಮಾಡಲಿ: ಬಿಜೆಪಿ ವಿರುದ್ಧ ಮಮತಾ ವಾಗ್ದಾಳಿ

ಕೊಲ್ಕತ್ತಾ, : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಫಲಿತಾಂಶಗಳ ಬಳಿಕ...

ಕೀವ್ ತೊರೆಯುವಂತೆ ವಿದೇಶಿ ರಾಯಭಾರ ಕಚೇರಿಗಳಿಗೆ ರಷ್ಯಾ ಎಚ್ಚರಿಕೆ

ಮಾಸ್ಕೋ/ಕೀವ್, : Russia ಸರ್ಕಾರವು ಕೀವ್‌ನಲ್ಲಿರುವ ವಿದೇಶಿ ರಾಯಭಾರ ಕಚೇರಿಗಳು ಹಾಗೂ...

Copying is disabled on Udupi Digital News.