Wednesday, June 17, 2026

ಬಳ್ಳಾರಿ ಅಹಿತಕರ ಘಟನೆ : ಡಿಸಿಎಂಗೆ ವರದಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ಉಡುಪಿ ಡಿಜಿಟಲ್ ನ್ಯೂಸ್ ಡಾಟ್ ಕಾಮ್
ಬೆಂಗಳೂರು:
ಇತ್ತೀಚೆಗೆ ಬಳ್ಳಾರಿಯಲ್ಲಿ  ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ಇದರಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕನ ನಡೆಸಿ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನೇಮಕವಾದ ಕಾಂಗ್ರೆಸ್ ನಿಯೋಗ ಶನಿವಾರ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದೆ.

ನಿಯೋಗದ ಸದಸ್ಯರುಗಳಾದ ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಕುಮಾರ್ ನಾಯಕ್, ಚಳ್ಳಿಕೆರೆ ಶಾಸಕ ಟಿ.ರಘುಮೂರ್ತಿ,  ವಿಧಾನ ಪರಿಷತ್ ಸದಸ್ಯರುಗಳಾದ ಜಕ್ಕಪ್ಪನವರು ಹಾಗೂ ಬಸವನಗೌಡ ಬಾದರ್ಲಿ ಈ ಸಂದರ್ಭದಲ್ಲಿ ಇದ್ದರು.

ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಜ.3 ರಂದು ಬಳ್ಳಾರಿಗೆ ತೆರಳಿದ್ದ ನಿಯೋಗದ ಸದಸ್ಯರು, ಪರಿಸ್ಥಿತಿ ಅವಲೋಕನ ನಡೆಸಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು, ಇಲಾಖಾ ಮುಖ್ಯಸ್ಥರು ಹಾಗೂ ಇತರ ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ವಿಸ್ತ್ರತವಾದ ವರದಿ ನೀಡಿದೆ.

More like this
Related

ಸುಕೇಶ್ ಚಂದ್ರಶೇಖರ್ ಪತ್ನಿ ಲೀನಾ ಮಾರಿಯಾ ಪಾಲ್ ಜಾಮೀನು ಅರ್ಜಿಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ರೂ.200 ಕೋಟಿ ವಂಚನೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ...

ಗ್ರೈಂಡರ್‌ನಿಂದ ವಿದ್ಯುತ್ ಶಾಕ್: ಚಾಮರಾಜನಗರದಲ್ಲಿ ನಾಲ್ಕು ವರ್ಷದ ಬಾಲಕಿ ದುರ್ಮರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕಳ್ಳಿಗೌಡನಹಳ್ಳಿ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿ ಮನೆಯ...

ಕೋಟ : ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಐರೋಡಿಯ ಯುತಿಗೆ 10.83 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಕೋಟ : ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಲಕ್ಷಾಂತರ ರೂ....

Copying is disabled on Udupi Digital News.