Sunday, September 13, 2026

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್

ಯುಡಿ ನ್ಯೂಸ್ ಡಾಟ್ ಕಾಮ್

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆ ಹಾಗೂ ಆಕ್ರೋಶಕ್ಕೆ ಗುರಿಯಾಗಿದ್ದ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಬುಧವಾರಕ್ಕೆ (ಜ.14) ಆದೇಶ ಕಾಯ್ದಿರಿಸಿತ್ತು. ಅದರಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ಪ್ರಕಟಿಸಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ನ್ಯಾಯಾಲಯವು ಜಾಮೀನು ನೀಡುವಾಗ ಕೆಲವು ಷರತ್ತುಗಳನ್ನು ವಿಧಿಸಿದೆ. ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಮತ್ತು ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಮಾಡಬಾರದು ಎಂದು ಸೂಚಿಸಿದೆ.

ಸಿಬಿಐ ಅಧಿಕಾರಿಗಳು ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಲು ಈಗಲೂ ಸ್ವತಂತ್ರರಾಗಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನ ತಾತ್ಕಲಿಕವಾಗಿ ಮತ್ತು ತಕ್ಷಣ ಬಂಧಿಸುವಂತಿಲ್ಲ. ಇದರಿಂದ ಅವರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.